ಸೋಮವಾರ, ಜೂಲೈ 6, 2020
23 °C
ಗಡಿಯಲ್ಲಿ ಭಾರತ–ಚೀನಾ ಸೇನೆ ಸಂಘರ್ಷ

’ಟ್ರಂಪ್‌– ಮೋದಿ ಮಾತುಕತೆ ನಡೆಸಿಲ್ಲ‘

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಲಡಾಖ್‌ನ ಪೂರ್ವ ಗಡಿಯಲ್ಲಿ ಚೀನಾ ಮತ್ತು ಭಾರತ ಸೇನೆಗಳ ನಡುವಿನ ಸಂಘರ್ಷಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡುವೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ.

‘ಭಾರತದ ಪ್ರಧಾನಿ ಮೋದಿ ಜೊತೆ ಮಾತನಾಡಿದ್ದೇನೆ. ಗಡಿ ಸಂಬಂಧ ಚೀನಾದೊಂದಿಗೆ ಉದ್ಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮೋದಿ ವಿಚಲಿತರಾಗಿದ್ದರು’ ಎಂಬ ಟ್ರಂಪ್‌ ಅವರ ಹೇಳಿಕೆ ಬೆನ್ನಲ್ಲೇ, ಕೇಂದ್ರ ಸರ್ಕಾರ ಈ ಸ್ಪಷ್ಟೀಕರಣ ನೀಡಿದೆ.

‘ಕೋವಿಡ್‌–19 ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೈಡ್ರೋಕ್ಲೋರೊಕ್ವಿನ್‌ ಮಾತ್ರೆ ಪೂರೈಸುವುದಕ್ಕೆ ಸಂಬಂಧಿಸಿ ಕಳೆದ ಏಪ್ರಿಲ್‌ 4ರಂದು  ಮೋದಿ ಅವರೊಂದಿಗೆ ಟ್ರಂಪ್‌ ಮಾತನಾಡಿದ್ದರು. ಅದಾದ ನಂತರ ಉಭಯ ನಾಯಕರ ನಡುವೆ ಯಾವುದೇ ಮಾತುಕತೆ ನಡೆದಿಲ್ಲ’ ಎಂದು ಇವೇ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು