ಭಾನುವಾರ, ಮೇ 31, 2020
27 °C

ಆಗಸ್ಟ್, ಸೆಪ್ಟೆಂಬರ್‌ನಲ್ಲಿ ವಾಡಿಕೆ ಮುಂಗಾರು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

50 ವರ್ಷಗಳ ಸರಾಸರಿ (ಎಲ್‌ಪಿಎ) ಮಳೆಯಲ್ಲಿ ಶೇ 96–104ರಷ್ಟು ಮಳೆಯಾದರೆ ಅದನ್ನು ವಾಡಿಕೆ ಮಳೆ ಎಂದು ಪರಿಗಣಿಸಲಾಗುತ್ತದೆ.

‘ಜುಲೈ ಅಂತ್ಯದವರೆಗೆ ಬಿಹಾರ, ಜಾರ್ಖಂಡ್ ಮತ್ತು ಈಶಾನ್ಯ ಭಾರತದ ರಾಜ್ಯಗಳನ್ನು ಹೊರತುಪಡಿಸಿ ದೇಶದ ಉಳಿದೆಡೆ ಉತ್ತಮ ಮಳೆಯಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಎಲ್‌ಪಿಎಯ ಶೇ 96ರಷ್ಟು ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ನಲ್ಲಿ 155.3 ಮಿ.ಮೀ. (ವಾಡಿಕೆಯಲ್ಲಿ ಶೇ 95) ಮತ್ತು ಜುಲೈನಲ್ಲಿ 272.4 ಮಿ.ಮೀ. (ವಾಡಿಕೆಯಲ್ಲಿ ಶೇ 94) ಮಳೆಯಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು