ಶನಿವಾರ, ಜೂನ್ 6, 2020
27 °C

ಗಡಿ ದಾಟಿಲ್ಲ: ಭಾರತ ಸ್ಪಷ್ಟನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಲಡಾಕ್‌ ಮತ್ತು ಸಿಕ್ಕಿಂ ವಲಯದ ಗಡಿಯಲ್ಲಿ ಭಾರತೀಯ ಸೇನಾ ಪಡೆಗಳು ಚೀನಾ ಪ್ರದೇಶ‌ ದಾಟಿವೆ ಎನ್ನುವ ಆರೋಪವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಳ್ಳಿಹಾಕಿದೆ.

’ಪಶ್ಚಿಮ ವಲಯ ಅಥವಾ ಸಿಕ್ಕಿಂ ವಲಯದ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಭಾರತೀಯ ಪಡೆಗಳು ಯಾವುದೇ ಚಟುವಟಿಕೆಗಳನ್ನು ಕೈಗೊಂಡಿಲ್ಲ. ಬದಲಾಗಿ, ಈ ಪ್ರದೇಶದಲ್ಲಿ ಭಾರತೀಯ ಪಡೆಗಳ ಗಸ್ತು ತಿರುಗಲು ಚೀನಾ ಅಡ್ಡಿಪಡಿಸಿತ್ತು‘ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್‌ ಶ್ರೀವಾಸ್ತವ್‌ ಸ್ಪಷ್ಟಪಡಿಸಿದ್ದಾರೆ.

’ಗಡಿ ವಿಷಯದಲ್ಲಿ ಭಾರತದ ಸೇನಾ ಪಡೆ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ. ಗಡಿ ವಿಷಯದ ಸೂಕ್ಷ್ಮಗಳನ್ನು ಅರಿತುಕೊಂಡಿದೆ. ಭಾರತದ ಗಡಿ ವ್ಯಾಪ್ತಿಯ ಒಳಗೆಯೇ ಎಲ್ಲ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ. ದೇಶದ ಸಾರ್ವಭೌಮತ್ವ ಮತ್ತು ಭದ್ರತೆ ಕಾಪಾಡಲು ಬದ್ಧರಾಗಿದ್ದೇವೆ‘ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು