ಭಾನುವಾರ, ಮಾರ್ಚ್ 29, 2020
19 °C

ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ಇಲ್ಲ: ಕಮಲನಾಥ್‌

ಪಿಟಿಐ Updated:

ಅಕ್ಷರ ಗಾತ್ರ : | |

ಭೋಪಾಲ್‌: ‘ತಮ್ಮ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್ ಮಂಗಳವಾರ ಹೇಳಿದರು. ವಿರೋಧಪಕ್ಷ ಬಿಜೆಪಿ ತನ್ನ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ.‌

‘ನಮಗೆ ದೊಡ್ಡ ಮೊತ್ತದ ಆಮಿಷ ಒಡ್ಡಲಾಗುತ್ತಿದೆ ಎಂದು ನಮ್ಮ ಶಾಸಕರು ಹೇಳುತ್ತಿದ್ದಾರೆ. ಉಚಿತವಾಗಿ ಕೊಡುವುದಿದ್ದರೆ ಆ ಹಣವನ್ನು ತೆಗೆದುಕೊಳ್ಳಿ ಎಂದು ನಾನು ಶಾಸಕರಿಗೆ ತಿಳಿಸಿದ್ದೇನೆ‌’ ಎಂದು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಕಮಲ್‌ನಾಥ್‌ ತಿಳಿಸಿದರು.

ಕಾಂಗ್ರೆಸ್‌ನ ಹಿರಿಯ ಮುಖಂಡ ದಿಗ್ವಿಜಯ ಸಿಂಗ್‌ ಅವರು ಸೋಮವಾರ, ‘ನಮ್ಮಪಕ್ಷದ ಶಾಸಕರಿಗೆ ಬಿಜೆಪಿಯ ದೊಡ್ಡ ಮೊತ್ತದ ಆಮಿಷ ಒಡ್ಡುತ್ತಿದ್ದು, ಸರ್ಕಾರದ ಪತನಕ್ಕೆ ಯತ್ನಿಸುತ್ತಿದೆ’ ಎಂದು ಆರೋಪಿಸಿದ್ದರು.

ಇದನ್ನೂ ಓದಿ... ಮಧ್ಯ ಪ್ರದೇಶದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ: ಬಿಜೆಪಿ ವಶದಲ್ಲಿ 8 ಶಾಸಕರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು