ಬುಧವಾರ, ಜುಲೈ 6, 2022
22 °C

ಕೇಜ್ರಿವಾಲ್‌ ಪತ್ನಿ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಆರೋಪ ಈಗ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರನ್ನೂ ಸುತ್ತಿಕೊಂಡಿದೆ. ಸುನೀತಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಿಜೆಪಿಯ ವಕ್ತಾರ ಹರೀಶ್‌ ಖುರಾನಾ ಅವರು ತೀಸ್‌ಹಜಾರಿ ಕೋರ್ಟ್‌ಗೆ  ಸೋಮವಾರ ದೂರು ಸಲ್ಲಿಸಿದ್ದಾರೆ.

ದೆಹಲಿ ಉತ್ತರ ಕ್ಷೇತ್ರದ ಎಎಪಿ ಅಭ್ಯರ್ಥಿ ಆತಿಶಿ ಅವರು ಅದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್‌ ಗಂಭೀರ್‌ ವಿರುದ್ಧ ಇಂಥದ್ದೇ ಆರೋಪ ಮಾಡಿ, ತೀಸ್‌ಹಜಾರಿ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಅದಕ್ಕೆ ಬಿಜೆಪಿ ಈ ರೀತಿ ಪ್ರತ್ಯುತ್ತರ ನೀಡಿದೆ.

‘ಸುನೀತಾ ಹೆಸರು ಉತ್ತರ ಪ್ರದೇಶದ ಸಾಹಿಬಾಬಾದ್‌ ಕ್ಷೇತ್ರ ಮತ್ತು ದೆಹಲಿಯ ಚಾಂದಿನಿಚೌಕ್‌ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದಾಖಲಾಗಿದೆ. ಅವರು ಚುನಾವಣಾ ರಾಜಕೀಯದಲ್ಲಿ ತೊಡಗಿಸಿಕೊಂಡವರು. ಆದ್ದರಿಂದ ಮತದಾರರ ಪಟ್ಟಿಯ ನಿರ್ವಹಣೆಯ ಬಗ್ಗೆ ಜ್ಞಾನ ಇದೆ’ ಎಂದು ಖುರಾನಾ ಅವರು ಸಲ್ಲಿಸಿದ ದೂರಿನಲ್ಲಿ ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು