ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ನಿರಾಕರಿಸಿದ ಸುಪ್ರೀಂ ಕೋರ್ಟ್

ನೌಹೆರಾ ಶೇಕ್‌ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ
Last Updated 17 ಅಕ್ಟೋಬರ್ 2018, 19:28 IST
ಅಕ್ಷರ ಗಾತ್ರ

ನವದೆಹಲಿ:ಬೆಂಗಳೂರಿನ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದು ಮಾಡುವಂತೆ ಸೂಚಿಸಬೇಕು ಎಂದುಅಖಿಲ ಭಾರತ ಮಹಿಳಾ ಎಂಪವರ್‌ಮೆಂಟ್‌ ಪಾರ್ಟಿ (ಎಂಇಪಿ) ಮುಖ್ಯಸ್ಥೆ ನೌಹೆರಾ ಶೇಕ್‌ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಎಂಇಪಿ ಟಿಕೆಟ್‌ ನೀಡುವಾಗ ಮೋಸ ಮಾಡಿದ್ದಾರೆ ಎಂದು ಹಲವು ಅಭ್ಯರ್ಥಿಗಳು ದೂರು ನೀಡಿದ್ದರು. ಇದರ ವಿಚಾರಣೆ ನಡೆಯುತ್ತಿದೆ.

ನ್ಯಾಯಮೂರ್ತಿಗಳಾದ ಎನ್‌.ವಿ.ರಮಣ ಹಾಗೂ ಮೋಹನ ಶಾಂತನಗೌಡರ ಅವರಿದ್ದ ಪೀಠವು, ಶೇಕ್‌ ಅವರ ಮನವಿಯನ್ನು ತಳ್ಳಿ ಹಾಕಿತು.

ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳಿಂದ ಖಾಲಿ ಚೆಕ್‌ಗಳನ್ನು ಶೇಕ್‌ ಪಡೆದಿದ್ದರು. ಇವುಗಳನ್ನು ಮರಳಿ ನೀಡಲಿಲ್ಲ ಎಂದು ದೂರು ದಾಖಲಾಗಿವೆ. 11 ಪ್ರಕರಣಗಳು ಅವರ ವಿರುದ್ಧ ದಾಖಲಾಗಿವೆ. ಮೇ 10ರಂದು ಬೆಂಗಳೂರಿನ ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ಸಹ ದಾಖಲಾಗಿವೆ. ಬೆಂಗಳೂರಿನ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನು ಪ್ರಶ್ನಿಸಿ ಶೇಕ್‌ ಅವರು, ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ, ಜುಲೈ 12 ರಂದು
ಅವರ ಮನವಿಯನ್ನುಹೈಕೋರ್ಟ್‌ ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT