ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ-ಎನ್‌ಆರ್‌ಸಿ ಅಂತಿಮ ಪಟ್ಟಿಯಲ್ಲಿ ಇಲ್ಲದಿದ್ದವರನ್ನು ಬಂಧಿಸುವುದಿಲ್ಲ

Last Updated 1 ಸೆಪ್ಟೆಂಬರ್ 2019, 13:41 IST
ಅಕ್ಷರ ಗಾತ್ರ

ನವದೆಹಲಿ: ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ ಅಂತಿಮ ಪಟ್ಟಿಯಲ್ಲಿ ಹೆಸರು ಇಲ್ಲದವರು ಮೊದಲಿನಂತೆ ಮುಂದೆಯೂ ತಮ್ಮ ಹಕ್ಕುಗಳನ್ನು ಹೊಂದಿರುತ್ತಾರೆ. ಯಾರನ್ನೂ ಬಂಧಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ರವೀಶ್‌ಕುಮಾರ್ ತಿಳಿಸಿದ್ದಾರೆ.

ಸುದ್ದಿಸಂಸ್ಥೆಗೆ ಭಾನುವಾರ ಈ ವಿಷಯ ತಿಳಿಸಿರುವ ಅವರು, ರಾಷ್ಟ್ರೀಯ ಪೌರತ್ವ ನೋಂದಣಿ ಸುಪ್ರೀಂ ಕೋರ್ಟ್ ಆದೇಶದಂತೆ ನಡೆಯುತ್ತಿದೆ. ಇದು ಕೇಂದ್ರ ಸರ್ಕಾರದ ಕಾರ್ಯಕ್ರಮವಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ, ಅದರ ಪ್ರಕಾರ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

2013ರಲ್ಲಿ ಒಪ್ಪಿಕೊಂಡಂತೆ ಎನ್‌ಆರ್‌‌ಸಿಯನ್ನು ಆರಂಭಿಸುವಂತೆ ನ್ಯಾಯಾಲಯ ತಿಳಿಸಿತ್ತು. ಇದರನ್ವಯ 2015ರಿಂದ ರಾಷ್ಟ್ರೀಯ ಪೌರತ್ವ ನೋಂದಣಿ ಪರಿಷ್ಕರಣೆ ನಡೆಯುತ್ತಿದೆ. ನ್ಯಾಯಾಲಯದ ಆದೇಶದಂತೆ,ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ, ಕಾನೂನಿನ ಪ್ರಕಾರ ಕಡ್ಡಾಯವಾಗಿ ಮಾಡಲೇಬೇಕಾದ ಕೆಲಸ ಎಂದಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಣಿಯ ಅಂತಿಮ ಪಟ್ಟಿ ಕುರಿತು ವಿದೇಶೀ ಮಾಧ್ಯಮಗಳಲ್ಲಿ ವರದಿಗಳು ಬಂದಿದ್ದು, ಇದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿವೆ. ಆದರೆ, 1985ರ ಅಸ್ಸಾಂ ಮತ್ತು ಕೇಂದ್ರ ಸರ್ಕಾರದ ನಡುವೆ ಆಗಿರುವ ಒಪ್ಪಂದದ ಪ್ರಕಾರ ನಡೆಯುತ್ತಿದ್ದು, ಅಸ್ಸಾಂ ನಾಗರೀಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT