ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಅನಿವಾಸಿ ಭಾರತೀಯ ಉದ್ಯಮಿ ತಾತ್ಕಾಲಿಕ ಬಿಡುಗಡೆ

Last Updated 7 ಡಿಸೆಂಬರ್ 2019, 15:45 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಬಂಧನದಲ್ಲಿರಿಸಿದ್ದ ಕಾಶ್ಮೀರ ಚೇಂಬರ್ಸ್‌ ಆಫ್‌ ಕಾಮರ್ಸ್‌ನ ಮಾಜಿ ಅಧ್ಯಕ್ಷ ಡಾ. ಮುಬೀನ್‌ ಶಾ ಅವರನ್ನು ತಾತ್ಕಾಲಿಕವಾಗಿ ಮೂರು ತಿಂಗಳ ಅವಧಿಗೆ ಶನಿವಾರ ಬಿಡುಗಡೆಗೊಳಿಸಲಾಗಿದೆ.

‘ಜಮ್ಮು ಮತ್ತು ಕಾಶ್ಮೀರದ ಗೃಹ ಕಾರ್ಯದರ್ಶಿ ಆದೇಶ ಹೊರಡಿಸಿದ ಬಳಿಕ ಮಲೇಷ್ಯಾ ಪೌರತ್ವ ಹೊಂದಿರುವ ಅನಿವಾಸಿ ಭಾರತೀಯ ಮುಬೀನ್‌ ಅವರನ್ನು ಆಗ್ರಾದ ಕೇಂದ್ರೀಯ ಕಾರಾಗೃಹದಿಂದ ಬಿಡುಗಡೆಗೊಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘2020 ಮಾರ್ಚ್‌ 7ರಂದು ಶರಣಾಗುವಂತೆ’ ಅವರಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಮುಬೀನ್‌ ಅವರನ್ನು ಬಿಡುಗಡೆಗೊಳಿಸಬೇಕೆಂದು ಕೋರಿ ಅವರ ಸಹೋದರ ನಿಯಾಜ್‌, ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಆಗಸ್ಟ್‌ 5ರಂದು ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇಲ್ಲಿನ ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಉದ್ಯಮಿಗಳನ್ನು ಬಂಧನದಲ್ಲಿರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT