ಶುಕ್ರವಾರ, ಏಪ್ರಿಲ್ 23, 2021
22 °C

ರಾಮ ಮಂದಿರ ನಿರ್ಮಾಣಕ್ಕೆ ಮೋದಿ ಆಪ್ತ ನೃಪೇಂದ್ರ ಮಿಶ್ರಾ ನೇತೃತ್ವ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ನೃಪೇಂದ್ರ ಮಿಶ್ರಾ ರಾಮ ಜನ್ಮಭೂಮಿ ಟ್ರಸ್ಟ್‌ನ ದೇಗುಲ ನಿರ್ಮಾಣ ಸಮಿತಿಯ ನೇತೃತ್ವವನ್ನು ವಹಿಸಿಕೊಳ್ಳಲಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ನೋಡಿಕೊಳ್ಳಲೆಂದು ಸುಪ್ರೀಂ ಕೋರ್ಟ್‌ ಸೂಚನೆಯಂತೆ ಪ್ರಧಾನಿ ನರೇಂದ್ರ ಮೋದಿ ಈಚೆಗೆ ಘೋಷಿಸಿದ್ದ ರಾಮ ಮಂದಿರ ಟ್ರಸ್ಟ್‌ನ ಸದಸ್ಯರು ಬುಧವಾರ ಸಭೆ ಸೇರಿ ಈ ತೀರ್ಮಾನ ತೆಗೆದುಕೊಂಡರು.

ರಾಮ ಮಂದಿರ ಟ್ರಸ್ಟ್‌ನ ಅಧ್ಯಕ್ಷರಾಗಿ ಮಹಾಂತ್ ನೃತ್ಯ ಗೋಪಾಲ್ ದಾಸ್, ಪ್ರಧಾನ ಕಾರ್ಯದರ್ಶಿಯಾಗಿ ಚಂಪತ್ ರೈ ಅವರನ್ನು ಇದೇ ಸಂದರ್ಭ ಚುನಾಯಿಸಲಾಯಿತು.

ಟ್ರಸ್ಟ್‌ನ ಮುಖ್ಯಸ್ಥರಾದ ಕೆ.ಪರಾಶರನ್ ಅವರ ದೆಹಲಿ ನಿವಾಸದಲ್ಲಿ ಸಭೆ ನಡೆಯಿತು. ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಫೆ.5ರಂದು 15 ಸದಸ್ಯರ ಟ್ರಸ್ಟ್‌ ಘೋಷಿಸಿ, 9 ಸದಸ್ಯರನ್ನು ಹೆಸರಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು