ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ನಿರ್ಮಾಣ ಸಮಿತಿಗೆ ಮಿಶ್ರಾ ಅಧ್ಯಕ್ಷ

Last Updated 19 ಫೆಬ್ರುವರಿ 2020, 20:06 IST
ಅಕ್ಷರ ಗಾತ್ರ

ನವದೆಹಲಿ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ರನ್ನಾಗಿ ಮಾಜಿ ಅಧಿಕಾರಿ ನೃಪೇಂದ್ರ ಮಿಶ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ಇವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಿದ್ದರು.

ಬುಧವಾರ ನಡೆದ ರಾಮಮಂದಿರ ಟ್ರಸ್ಟ್‌ನ ಪ್ರಥಮ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಳಿದಂತೆ, ಟ್ರಸ್ಟ್‌ನ ಅಧ್ಯಕ್ಷರಾಗಿ ಮಹಂತ ನೃತ್ಯ ಗೋಪಾಲದಾಸ್‌ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಚಂಪತ್‌ ರಾಯ್‌ ಅವರು ಆಯ್ಕೆಯಾದರು.

ಹಿರಿಯ ವಕೀಲ ಕೆ.ಪರಾಶರನ್‌ ಅವರ ನಿವಾಸದಲ್ಲಿ ಸಭೆ ನಡೆಯಿತು. ಟ್ರಸ್ಟ್‌ನ ಖಜಾಂಚಿಯಾಗಿ ಸ್ವಾಮಿ ಗೋವಿಂದ್‌ ದೇವ್‌ ಗಿರಿ ಅವರನ್ನು ಆಯ್ಕೆಮಾಡಲಾಯಿತು. ಅಲ್ಲದೆ, ಮಂದಿರದ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಕುರಿತು ಸಭೆ ಚರ್ಚಿಸಿತು.

ಮಂದಿರ ನಿರ್ಮಾಣ ಕಾರ್ಯಕ್ಕಾಗಿ ದೇಣಿಗೆಯನ್ನು ಸಂಗ್ರಹಿಸಲು ಅನುವಾಗುವಂತೆ ಎಸ್‌ಬಿಐನ ಅಯೋಧ್ಯೆಯ ಶಾಖೆಯಲ್ಲಿ ಖಾತೆ ತೆರೆಯಲು ನಿರ್ಧರಿಸಲಾಯಿತು ಎಂದು ಸಭೆಯ ನಂತರ ಚಂಪತ್ ರಾಯ್‌ ಸುದ್ದಿಗಾರರಿಗೆ ತಿಳಿಸಿದರು. ಟ್ರಸ್ಟ್ ಸ್ಥಾಪಿಸುವ ನಿರ್ಧಾರವನ್ನು ಪ್ರಧಾನಿ ಮೋದಿ ಫೆ.5ರಂದು ಸಂಸತ್ತಿನಲ್ಲಿ ಪ್ರಕಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT