ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿದ ಎನ್‌ಟಿಎ

Last Updated 30 ಏಪ್ರಿಲ್ 2020, 19:30 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ವಿಶ್ವವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ವಿಸ್ತರಿಸಿದೆ.

‘ಕೋವಿಡ್‌–19ನಿಂದಾಗಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕಷ್ಟವಾಗಲಿದೆ. ಹೀಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸುವಂತೆ ಎನ್‌ಟಿಎಗೆ ಸೂಚಿಸಲಾಗಿತ್ತು’ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಗುರುವಾರ ಹೇಳಿದ್ದಾರೆ.

ಪ್ರವೇಶ ಪತ್ರ ಹಾಗೂ ಪರೀಕ್ಷಾ ದಿನಾಂಕ ಕುರಿತ ವಿವರಗಳನ್ನು ಆಯಾ ಪರೀಕ್ಷೆಗೆ ಸಂಬಂಧಿಸಿದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ.

ವಿಸ್ತರಣೆ: ನ್ಯಾಷನಲ್‌ ಕೌನ್ಸಿಲ್‌ ಆಫ್‌ ಹೋಟೆಲ್‌ ಮ್ಯಾನೇಜ್‌ಮೆಂಟ್‌ (ಜೆಇಇ 2020), ಇಂದಿರಾ ಗಾಂಧಿ ನ್ಯಾಷನಲ್‌ ಒಪನ್‌ ಯೂನಿವರ್ಸಿಟಿಯ ಪಿಎಚ್‌.ಡಿ ಹಾಗೂ ಎಂಬಿಎ ಪ್ರವೇಶ ಪರೀಕ್ಷೆ, ಐಸಿಎಆರ್‌, ಜೆಎನ್‌ಯುಇಇ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 15ರ ವರೆಗೆ ವಿಸ್ತರಿಸಲಾಗಿದೆ.

ಸ್ನಾತಕೋತ್ತರಆಯುಷ್‌ ಕೋರ್ಸ್‌ಗಳ (ಎಐಎಪಿಜಿಇಟಿ–2020) ಪ್ರವೇಶ ಪರೀಕ್ಷೆಗೆ ಜೂನ್‌ 5 ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಎನ್‌ಟಿಎ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT