ಶನಿವಾರ, ಜೂಲೈ 11, 2020
29 °C

ಹಲವು ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ಜೂನ್‌15ರವರೆಗೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ‍ಪ್ರವೇಶ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್‌ಟಿಎ) ನಾಲ್ಕನೇ ಬಾರಿಗೆ ವಿಸ್ತರಿಸಿದೆ.

ಪಿಎಚ್‌.ಡಿ ಹಾಗೂ ಒಪಿಇಎನ್‌ಎಂಎಟಿ(ಎಂಬಿಎ)ಗೆ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ(ಇಗ್ನೊ) ನಡೆಸುವ ಪ್ರವೇಶ ಪರೀಕ್ಷೆ, ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್‌)2020, ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ(ಜೆಎನ್‌ಯುಇಇ)2020ಕ್ಕೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಜೂನ್‌ 15ರವರೆಗೆ ವಿಸ್ತರಿಸಲಾಗಿದೆ. 

ಯುಜಿಸಿ–ನೆಟ್‌ ಜೂನ್‌ 2020 ಹಾಗೂ ಸಿಎಸ್‌ಐಆರ್‌–ಯುಜಿಸಿ ನೆಟ್‌ ಜೂನ್‌ 2020ಕ್ಕೂ ಜೂನ್‌ 15ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಎನ್‌ಟಿಎ ಪ್ರಕಟಣೆಯಲ್ಲಿ ತಿಳಿಸಿದೆ. 

ಜೂನ್‌ 15 ಸಂಜೆ 5 ಗಂಟೆಯವರೆಗೆ ಈ ಪ್ರವೇಶ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅದೇ ದಿನ ರಾತ್ರಿ 11.50ರೊಳಗೆ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು. ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳುವ ದಿನಾಂಕವನ್ನು ಎನ್‌ಟಿಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು