ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚು ಅಂಕ: ಭಿನ್ನ ಅನುಪಾತದಲ್ಲಿ ಸಂದರ್ಶನ

Last Updated 4 ಡಿಸೆಂಬರ್ 2019, 15:59 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಅಧಿಕಾರಿಗಳ ಹುದ್ದೆಗೆ ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗಿಂತ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಅಭ್ಯರ್ಥಿಗಳು ಹೆಚ್ಚು ಅಂಕಗಳಿಸಿದ್ದರಿಂದ, ಕಟ್‌ ಆಫ್‌ ಅಂಕಗಳನ್ನು ಬದಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು 1:3ರ ಅನುಮಾತದಲ್ಲಿ ಮತ್ತು ಒಬಿಸಿ ಅಭ್ಯರ್ಥಿಗಳನ್ನು 1:12ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

2013ರಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿತ್ತು. ಕಟ್‌ ಆಫ್ ಮಾರ್ಕ್‌ ಬದಲಿಸುವ ಮತ್ತು ಎರಡೂ ವರ್ಗಗಳಿಗೆ ಬೇರೆ–ಬೇರೆ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯುವ ಉತ್ತರ ಪ್ರದೇಶ ಲೋಕಸೇವಾ ಆಯೋಗದ ನಿರ್ಧಾರಕ್ಕೆ ಅಲಹಾಬಾದ್ ಹೈಕೋರ್ಟ್‌ ತಡೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT