ಪ್ರಿಯಾಂಕಾ ವಿರುದ್ಧ ಅವಹೇಳನಕಾರಿ ಟ್ವೀಟ್‌: ಬಂಧನ

7

ಪ್ರಿಯಾಂಕಾ ವಿರುದ್ಧ ಅವಹೇಳನಕಾರಿ ಟ್ವೀಟ್‌: ಬಂಧನ

Published:
Updated:

ಕತಿಹಾರ್‌: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. 

ಉತ್ತರ ಬಿಹಾರದ ವಿನೋದಪುರ ‌ನಿವಾಸಿ ಯೋಗಿ ಸೂರಜ್‌ನಾಥ ಬಂಧಿತ. ಟ್ವಿಟರ್‌ನಲ್ಲಿ ಪ್ರಿಯಾಂಕಾ ಅವರ ಭಾವಚಿತ್ರವನ್ನು ತಿರುಚಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ್ದಕಾಗಿ ಈತನನ್ನು ಬಂಧಿಸಲಾಗಿದೆ.

ತಾನು ‘ಪ್ರಧಾನಿ ಮೋದಿ ಭಕ್ತ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಬಿಂಬಿಸಿಕೊಂಡಿದ್ದ ಸೂರಜ್‌ನಾಥ, ಟ್ವಿಟರ್‌ನಲ್ಲಿ ಬಿಜೆಪಿ ಬೆಂಬಲಿಗನಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ. 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !