ಭಾನುವಾರ, ಮಾರ್ಚ್ 7, 2021
31 °C

ಲಾಕ್‌‌ಡೌನ್: ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ ಅಪಘಾತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ (ಒಡಿಶಾ): ಗುಜರಾತ್‌ನ ಸೂರತ್‌ನಿಂದ ಒಡಿಶಾಕ್ಕೆ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್‌ ಫಲ್ಬನಿ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಅಪಘಾತಕ್ಕೆ ತುತ್ತಾಗಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 

ಒಡಿಶಾದ ಗಂಜಾಮ್‌–ಕಂದಮಾಲ್‌ ಗಡಿಯಲ್ಲಿ ಬರುವ ಕಳಿಂಗಾ ಘಾಟ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಬಸ್‌ ಉರುಳಿ ಬಿದ್ದಿದೆ. ಗುಜರಾತ್‌ನ ಸೂರತ್‌ನಿಂದ ಒಡಿಶಾದ ಗಂಜಾಮ್‌ಗೆ ವಲಸೆ ಕಾರ್ಮಿಕರನ್ನು ಕರೆದೊಯ್ಯಲಾಗುತ್ತಿತ್ತು.

ಈ ಕುರಿತು ಮಾತನಾಡಿರುವ ಒಡಿಶಾದ ದಕ್ಷಿಣ ವಲಯದ ಡಿಐಜಿ, ಸತ್ಯಬಾರ್ತ ಬೋಯ್‌, ‘ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರಗೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ,’ ಎಂದು ತಿಳಿಸಿದ್ದಾರೆ.   

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು