ಶುಕ್ರವಾರ, ಏಪ್ರಿಲ್ 3, 2020
19 °C

ಬಿಜೆಡಿ ಅಧ್ಯಕ್ಷರಾಗಿ ನವೀನ್‌ ಪಟ್ನಾಯಕ್‌ 8ನೇ ಬಾರಿ ಆಯ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭುವನೇಶ್ವರ : ಒಡಿಶಾದ ಆಡಳಿತಾರೂಢ ಬಿಜು ಜನತಾದಳ (ಬಿಜೆಡಿ) ಪಕ್ಷದ ಅಧ್ಯಕ್ಷರಾಗಿ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ಸತತ ಎಂಟನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಟ್ನಾಯಕ್‌ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ವರ್ಷ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಪಟ್ನಾಯಕ್‌ ನೇತೃತ್ವದಲ್ಲಿ ಪಕ್ಷವು ಭರ್ಜರಿ ಜಯ ಸಾಧಿಸಿತ್ತು. ಐದನೇ ಬಾರಿಗೆ ಅವರು ಮುಖ್ಯಮಂತ್ರಿ ಹುದ್ದೆಗೇರಿದ್ದರು.

‘ಪಕ್ಷವು ಸೋಲು–ಗೆಲುವಿಗಾಗಿ ಚುನಾವಣೆಯಲ್ಲಿ ಹೋರಾಟ ನಡೆಸಿಲ್ಲ. ಒಡಿಶಾದ ಜನರ ಪ್ರೀತಿ ಮತ್ತು ವಾತ್ಸಲ್ಯ ಗೆಲ್ಲಲು ಮತ್ತು ಅವರ ಸೇವೆಗಾಗಿ ಹೋರಾಟ ನಡೆಸಿದೆ’ ಎಂದು ಪುನರಾಯ್ಕೆಯಾದ ಬಳಿಕ ಪಟ್ನಾಯಕ್‌ ಅವರು ಹೇಳಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು