ಶನಿವಾರ, ಜೂನ್ 19, 2021
27 °C

ಏಪ್ರಿಲ್ 30ವರೆಗೆ ಒಡಿಶಾದಲ್ಲಿ ಲಾಕ್ ಡೌನ್ ಜಾರಿ: ಪಟ್ನಾಯಕ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಒಡಿಶಾ: ಕೊರೊನಾ ಸೋಂಕು ದೇಶದಾದ್ಯಂತ ಹರಡುತ್ತಿರುವ ಕಾರಣ ರಾಜ್ಯದಲ್ಲಿ ಏಪ್ರಿಲ್ 30ರವರೆಗೆ ಲಾಕ್ ಡೌನ್ ಮುಂದುವರಿಸಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಆದೇಶ ಹೊರಡಿಸಿದ್ದಾರೆ.

ಇದು ದೇಶದಲ್ಲಿಯೇ ಲಾಕ್‌‌ಡೌನ್ ಮುಂದುವರಿಸಿ ಜಾರಿ ಮಾಡಿರುವ ಮೊದಲ ರಾಜ್ಯ ಒಡಿಶಾ. ಅಲ್ಲದೆ, ಕೇಂದ್ರ ಕೂಡ ಇದೇ ಮಾದರಿ ಅನುಸರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಕೊರೊನಾ ಸೋಂಕು ಹೆಚ್ಚು ಹರಡುವುದನ್ನು ತಪ್ಪಿಸಲು ರೈಲು ಹಾಗೂ ವಿಮಾನ ಯಾನ ಆರಂಭ ಮಾಡದಂತೆ ಮನವಿ ಮಾಡಿದ್ದಾರೆ. ಒಡಿಶಾದಲ್ಲಿ ಈಗಾಗಲೇ ಶಿಕ್ಷಣ ಸಂಸ್ಥೆಗಳನ್ನು ಜೂನ್ 17ರವರೆಗೆ ಮುಚ್ಚುವಂತೆ ಆದೇಶಿಸಿರುವ ಪಟ್ನಾಯಕ್, ಶತಮಾನಕ್ಕೂ ಹೆಚ್ಚು ಕಾಲದ ನಂತರ ಮಾನವನಿಗೆ ಇದೊಂದು ಬೃಹತ್ ಬೆದರಿಕೆಯಾಗಿದೆ.

ಜೀವನವು ಎಂದಿಗೂ ಒಂದೇ ಆಗಿರುವುದಿಲ್ಲ ಎಂದು ಪಟ್ನಾಯಕ್ ತಿಳಿಸಿದ್ದಾರೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ಕೇಂದ್ರವನ್ನು ಒತ್ತಾಯಿಸುವ ನಿರ್ಣಯಕೈಗೊಂಡಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಜೀವನ ಯಾವಾಗಲೂ ಒಂದೇ ರೀತಿ ಇರುವುದಿಲ್ಲ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಆ ಮೂಲಕ ಎಲ್ಲರೂ ಧೈರ್ಯವಾಗಿ ಎದುರಿಸಬೇಕು ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು