ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌‌ಡೌನ್: ಶುಲ್ಕ ಪಾವತಿ ಮುಂದೂಡಲು ಶಿಕ್ಷಣ ಸಂಸ್ಥೆಗಳಿಗೆ ಮುಖ್ಯಮಂತ್ರಿ ಸಲಹೆ

Last Updated 10 ಏಪ್ರಿಲ್ 2020, 11:02 IST
ಅಕ್ಷರ ಗಾತ್ರ

ಒಡಿಶಾ: ಲಾಕ್ ಡೌನ್ ಜಾರಿಯಲ್ಲಿರುವ ಕಾರಣ ಹಲವರಿಗೆ ಶಾಲಾ ಶುಲ್ಕ ಪಾವತಿಸಲು ಕಷ್ಟವಾಗುತ್ತಿದ್ದು ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಏಪ್ರಿಲ್‌‌ನಿಂದ ಜೂನ್‌ವರೆಗೆ ಮುಂದೂಡುವಂತೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಲೆಹೆ ನೀಡಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಪ್ಪಿಸುವ ಸಲುವಾಗಿ ಲಾಕ್‌ಡೌನ್ ಜಾರಿ ಮಾಡಲಾಗಿದ್ದು, ಇದು ಹಲವು ಪೋಷಕರ ಆರ್ಥಿಕ ಪರಿಸ್ಥಿತಿಯ ಮೇಲೆ ದುಷ್ಪರಿಣಾಮ ಬೀರಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶುಲ್ಕ ಪಾವತಿಸುವುದನ್ನು ಮುಂದೂಡಬೇಕು. ಸಾಧ್ಯವಾದರೆ ಕಡಿಮೆ ಮಾಡಬೇಕು ಎಂದು ಮುಖ್ಯಮಂತ್ರಿ ಪಟ್ನಾಯಕ್ ಟ್ವೀಟ್‌ನಲ್ಲಿ ಸಲಹೆ ನೀಡಿದ್ದಾರೆ.

ಗುರುವಾರ ಏಪ್ರಿಲ್ ಅಂತ್ಯದವರೆಗೆ ಲಾಕ್‌ಡೌನ್ ಮುಂದುವರಿಸಲು ಒಡಿಶಾ ಸಚಿವ ಸಂಪುಟ ತೀರ್ಮಾನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT