ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫನಿ ಚಂಡಮಾರುತ: ಕೇರಳ, ಒಡಿಶಾದಲ್ಲಿ ಹೈ ಅಲರ್ಟ್

ಅಧಿಕ ಮಳೆ ಬೀಳುವ ಸಂಭವ
Last Updated 30 ಏಪ್ರಿಲ್ 2019, 6:06 IST
ಅಕ್ಷರ ಗಾತ್ರ

ನವದೆಹಲಿ: ಫನಿ ಚಂಡಮಾರುತ ತೀವ್ರವಾಗುತ್ತಿರುವಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಕೇರಳ, ಒಡಿಶಾಗಳಲ್ಲಿ ಭಾರೀ ಮಳೆ ಸುರಿಯಲಿದ್ದು, ಇನ್ನು ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗಲಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ ಗುರುವಾರ ಈ ಚಂಡ ಮಾರುತದ ತೀವ್ರತೆ ಹೆಚ್ಚಾಗಲಿದೆ. ಹಾಗಾಗಿ ಹೈ ಅಲರ್ಟ್ ಘೋಷಿತ ರಾಜ್ಯಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ಭಾರತೀಯ ಸೇನೆ, ನೌಕಾಪಡೆ, ವಾಯುಪಡೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಂಗಾಳ ಕೊಲ್ಲಿಯ ಈಶಾನ್ಯದಿಂದ950 ಕಿ.ಮೀ ದೂರದಿಂದಈ ಚಂಡಮಾರುತಸಾಗಿ ಬರಲಿದೆ.

ಗುರುವಾರದಿಂದ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದಕೆಲವು ದಿನಗಳ ಕಾಲ ಮೀನುಗಾರರಿಗೆ ಸಮುದ್ರದ ಬಳಿ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT