‘ಫೋನಿ’ ನಷ್ಟ ₹ 12 ಸಾವಿರ ಕೋಟಿ

ಸೋಮವಾರ, ಮೇ 20, 2019
31 °C
ಕೇಂದ್ರದ ತಂಡಕ್ಕೆ ತಾತ್ಕಾಲಿಕ ವರದಿ ಸಲ್ಲಿಕೆ

‘ಫೋನಿ’ ನಷ್ಟ ₹ 12 ಸಾವಿರ ಕೋಟಿ

Published:
Updated:

ಭುವನೇಶ್ವರ: ಫೋನಿ ಚಂಡಮಾರುತದಿಂದ ರಾಜ್ಯದಲ್ಲಿ ₹12 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಒಡಿಶಾ ಸರ್ಕಾರ ಅಂದಾಜಿಸಿದೆ. 

‘ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರದ ತಂಡಕ್ಕೆ ಪ್ರಾಥಮಿಕ ವರದಿ ಸಲ್ಲಿಸಲಾಗಿದೆ. ನಷ್ಟದ ವಾಸ್ತವಿಕ ಪ್ರಮಾಣ ತಿಳಿಯಲು ಅಧಿಕಾರಿಗಳು ಮನೆ ಮನೆಗೂ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಸಮೀಕ್ಷೆ ಪೂರ್ಣಗೊಂಡ ಬಳಿಕ ವಿವರವಾದ ವರದಿ ಸಿದ್ಧಪಡಿಸಲಾಗುವುದು’ ಎಂದು ವಿಶೇಷ ಪರಿಹಾರ ಆಯುಕ್ತ (ಎಸ್‌ಆರ್‌ಸಿ) ಬಿ.ಪಿ. ಸೇಠಿ ತಿಳಿಸಿದ್ದಾರೆ. 

‘ಈಗ ಸಲ್ಲಿಸಿರುವ ವರದಿ ತಾತ್ಕಾಲಿಕ. ಸಮೀಕ್ಷೆ ಬಳಿಕ ನಷ್ಟದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ಕೇಂದ್ರದ ತಂಡದ ಜತೆ ಸಭೆ ನಡೆಸಿದ ಬಳಿಕ ಮುಖ್ಯ ಕಾರ್ಯದರ್ಶಿ ಎ.ಪಿ. ಪಢಿ ತಿಳಿಸಿದ್ದಾರೆ. 

ವಿದ್ಯುತ್ ಕ್ಷೇತ್ರದಲ್ಲಿ ₹1,160 ಕೋಟಿ, ಪಂಚಾಯತ್ ರಾಜ್ ಮತ್ತು ಕುಡಿಯುವ ನೀರು ವಿಭಾಗದಲ್ಲಿ ₹587 ಕೋಟಿ ನಷ್ಟವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 

ಇದನ್ನೂ ಓದಿ: ಸಾವಿನ ಸಂಖ್ಯೆ 29ಕ್ಕೆ ಏರಿಕೆ

ನಿಯಮಾವಳಿ ಪರಿಷ್ಕರಣೆಗೆ ಮನವಿ: ರಾಜ್ಯ ಮತ್ತು ಕೇಂದ್ರ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ನಿಯಮಾವಳಿಗಳನ್ನು ಪರಿಷ್ಕರಿಸಲು ಕೇಂದ್ರದ ತಂಡಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಪಢಿ ಹೇಳಿದ್ದಾರೆ. 

ಕಡಿಮೆ ಸಾಮರ್ಥ್ಯದ ವಿದ್ಯುತ್ ಸರಬರಾಜಿನಿಂದ ಉಂಟಾದ ಹಾನಿಗೆ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ನಿಯಮದ ಅಡಿಯಲ್ಲಿ ಪರಿಹಾರ ದೊರಕುತ್ತದೆ. ಆದರೆ ಹೈಟೆನ್ಷನ್ ವಿದ್ಯುತ್ ಸರಬರಾಜಿನಿಂದ ಆದ ನಷ್ಟಕ್ಕೆ ಪರಿಹಾರ ನೀಡಲು ಅವಕಾಶವಿಲ್ಲ. ಆದ್ದರಿಂದ ಈ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !