ಜಮ್ಮು: ಕಣಿವೆ ರಾಜ್ಯದ ಜಮ್ಮು, ಕಾಶ್ಮೀರ ಹಾಗೂ ಲಡಾಖ್‌ನ ಎತ್ತರದ ಪ್ರದೇಶಗಳಲ್ಲಿ ಲಘು ಹಿಮಪಾತ ಉಂಟಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಎರಡು ಕೇಂದ್ರಾಡಳಿತ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಗುರುವಾರ ಹಾಗೂ ಶುಕ್ರವಾರ ಇದೇ ಸ್ಥಿತಿ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.

ಭಾರಿ ಹಿಮಪಾತದ ಜತೆಗೆ ಮಳೆಯೂ ಬೀಳುತ್ತಿದ್ದುದರಿಂದ ಈ ಪ್ರದೇಶದಲ್ಲಿ ಜನಜೀವನಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಕಾಶ್ಮೀರದ ಉತ್ತರಭಾಗ, ಪುಲ್ಗಾಮ್ ಹಾಗೂ ಕೇಂದ್ರ ಕಾಶ್ಮೀರದ ಸೋನಾಮಾರ್ಗ್ ಪ್ರದೇಶದಲ್ಲಿಯೂ ಲಘು ಹಿಮಪಾತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಟ್ಟವಾದ ಮಂಜಿನಿಂದಾಗಿ ನಾಲ್ಕು ದಿನಗಳಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆ ಬರುವ ಹಾಗೂ ಹೊರಹೋಗುವ ಎಲ್ಲ ವಿಮಾನಗಳನ್ನು ರದ್ದುಪಡಿಸಲಾಗಿದೆ. ಗೋಚರಿಸುವ ಪ್ರಮಾಣ ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಡೀಗಡದಲ್ಲೂ ದಟ್ಟ ಮಂಜು: ರಾಜ್ಯ ಮತ್ತು ನೆರೆಯ ಹರಿಯಾಣದಲ್ಲಿ ದಟ್ಟ ಮಂಜಿನ ವಾತಾವರಣ ಮುಂದುವರಿದಿದ್ದು, ಪಂಜಾಬ್‌ನ ಅದಂಪೂರ್ ಮತ್ತು ಲುಧಿಯಾನದಲ್ಲಿ ಬುಧವಾರ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿದಿತ್ತು.

ಅದಂಪೂರ್ ಹಾಗೂ ಲುಧಿಯಾನದಲ್ಲಿ ಕ್ರಮವಾಗಿ 3.4 ಹಾಗೂ 3.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಅಮೃತ್‌ಸರದಲ್ಲಿ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.