ಭಾನುವಾರ, ಫೆಬ್ರವರಿ 23, 2020
19 °C
ಬಿಡುಗಡೆಗೆ ಆದೇಶ ನೀಡುವಂತೆ ಒಮರ್ ಸಹೋದರಿಯಿಂದ ಮನವಿ

ಒಮರ್ ಅಬ್ದುಲ್ಲಾ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Omar Abdullah

ನವದೆಹಲಿ: ಜಮ್ಮು–ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಒಮರ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅನ್ವಯ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

‘ಒಮರ್ ಬಂಧನವು ಸಂವಿಧಾನಿಕ ಹಕ್ಕಾದ ವಾಕ್‌ಸ್ವಾತಂತ್ರ್ಯದ ಉಲ್ಲಂಘನೆ. ರಾಜಕೀಯ ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ ವ್ಯವಸ್ಥಿತ ಹುನ್ನಾರ. ಕೂಡಲೇ ಅವರ ಬಿಡುಗಡೆಗೆ ಆದೇಶಿಸಬೇಕು’ ಎಂದು ಸಾರಾ ಮನವಿ ಮಾಡಿದ್ದಾರೆ.

ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಆಗಸ್ಟ್‌ 5ರಿಂದ ಒಮರ್ ಅವರನ್ನು ಬಂಧನದಲ್ಲಿರಿಸಲಾಗಿದೆ. ಕಳೆದ ವಾರ ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆ ಹೇರಿ ಬಂಧನದ ಅವಧಿ ವಿಸ್ತರಿಸಲಾಗಿತ್ತು.

ಇದನ್ನೂ ಓದಿ: ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆ ಹೇರಿಕೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು