ಶುಕ್ರವಾರ, ಫೆಬ್ರವರಿ 21, 2020
18 °C

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಒಮರ್‌ ಅಬ್ದುಲ್ಲಾ ಸಹೋದರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ (ಪಿಎಸ್‌ಎ) ಬಂಧಿಸಿರುವುದನ್ನು ಪ್ರಶ್ನಿಸಿ, ಅವರ ಸಹೋದರಿ ಸಾರಾ ಅಬ್ದುಲ್ಲ ಪೈಲಟ್‌ ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. 

ನ್ಯಾಯಮೂರ್ತಿ ಎನ್‌.ವಿ. ರಮಣ ಅವರ ನೇತೃತ್ವದ ನ್ಯಾಯಪೀಠದ ಮುಂದೆ ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌ ವಾದ ಮಂಡಿಸಿದರು. ಅರ್ಜಿಯನ್ನು ಶೀಘ್ರವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಮನವಿ ಸಲ್ಲಿಸಿದರು. ಒಮರ್‌ ಅಬ್ದುಲ್ಲಾ ಅವರ ಬಂಧನವನ್ನು ಪ್ರಶ್ನಿಸಿ ಈಗಾಗಲೇ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿರುವುದಾಗಿ ಸಿಬಲ್‌ ಪೀಠದ ಗಮನಕ್ಕೆ ತಂದರು. ಅರ್ಜಿಯನ್ನು ಶೀಘ್ರವಾಗಿ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಪೀಠ ತಿಳಿಸಿತು. 

‘ಸಂಸದರಾಗಿ, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ರಾಷ್ಟ್ರಕ್ಕಾಗಿ ದುಡಿದವರನ್ನು ಇದೀಗ ರಾಷ್ಟ್ರಕ್ಕೆ ಅಪಾಯ ಎನ್ನುವ ರೀತಿಯಲ್ಲಿ ನೋಡಲಾಗುತ್ತಿದೆ. ಬಂಧನದ ಸಂದರ್ಭದಲ್ಲಿ ನೀಡಿದ ಕಾರಣಗಳೂ ಅನುಮಾನ ಹುಟ್ಟಿಸುವಂತಿವೆ. ಬಂಧನದ ಆದೇಶವೇ ಕಾನೂನಿಗೆ ವಿರುದ್ಧವಾಗಿದೆ. ಹೀಗಾಗಿ ನ್ಯಾಯಾಲಯವು ಪಿಎಸ್‌ಎ ಅಡಿ ಬಂಧನಕ್ಕೆ ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಸಾರಾ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು