ಶುಕ್ರವಾರ, ಜೂಲೈ 10, 2020
22 °C

ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ಗೆ ಉಗ್ರ ಬಲಿ, ಓರ್ವ ಯೋಧ ಹುತಾತ್ಮ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

prajavani

ಶ್ರೀನಗರ: ಜಮ್ಮು ಪ್ರಾಂತ್ಯದ ದೋದಾ ಜಿಲ್ಲೆಯ ಗುಂಡ್ನಾ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಉಗ್ರನೊಬ್ಬ ಬಲಿಯಾಗಿದ್ದಾನೆ.

‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಭಾನುವಾರ ಮುಂಜಾನೆಯಿಂದಲೇ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಉಗ್ರನೊಬ್ಬ ಹತ್ಯೆಯಾಗಿದ್ದು, ಗುರುತು ಪತ್ತೆಯಾಗಿಲ್ಲ. ಮತ್ತೊಬ್ಬ ಉಗ್ರ ಬಚ್ಚಿಟ್ಟುಕೊಂಡಿದ್ದಾನೆ’ ಎಂದು ಜಮ್ಮುವಿನ ಐಜಿಪಿ ಮುಖೇಶ್‌ ಸಿಂಗ್‌ ತಿಳಿಸಿದರು.

‘ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ’ ಎಂದು ರಕ್ಷಣಾ ಇಲಾಖೆಯ ವಕ್ತಾರ ಕರ್ನಲ್‌ ಆನಂದ್‌ ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು