ಬುಧವಾರ, ಮೇ 27, 2020
27 °C

ಕೊರೊನಾ ಪಾಸಿಟಿವ್: ಮನೆಗೆ ಮುದ್ರೆ ಹಾಕಲು ಹೋದವರ ಮೇಲೆ ಹಲ್ಲೆ, ಒಬ್ಬನ ಬಂಧನ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮುಂಬೈ: ಕೊರೊನಾ ಪಾಸಿಟಿವ್ ಇರುವ ವ್ಯಕ್ತಿಯ ಮನೆಗೆ ಮುದ್ರೆ ಹಾಕಲು ಮುಂದಾದ ಬೃಹತ್ ಮುಂಬೈ ನಗರಪಾಲಿಕೆ ತಂಡದ ಮೇಲೆ ಹಲ್ಲೆ ನಡೆಸಿದ್ದ ವ್ಯಕ್ತಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಧಾರಾವಿ ಪ್ರದೇಶದಲ್ಲಿ ಬುಧವಾರ ಘಟನೆ ನಡೆದಿತ್ತು. ಪಾಲಿಕೆ ತಂಡದ ಸದಸ್ಯರನ್ನು ಧಾರಾವಿಯ ಕೆಲ ವ್ಯಕ್ತಿಗಳು ಅಡ್ಡಗಟ್ಟಿದ್ದಲ್ಲದೆ, ಕೊರೊನಾ ಪಾಸಿಟಿವ್ ಹೊಂದಿದ ವ್ಯಕ್ತಿಯ ಮನೆಗೆ ಮುದ್ರೆ ಹಾಕದಂತೆ ತಡೆದಿದ್ದರು. ಈ ಸಮಯದಲ್ಲಿ ಅಧಿಕಾರಿಗಳು ತಮ್ಮ ಕೆಲಸ ಮುಂದುವರಿಸಲು ಅಡ್ಡಿಯಾಗಿದ್ದರು. ಕೂಡಲೆ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ:

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗುರುವಾರ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. 7 ರಿಂದ 8 ಮಂದಿ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಪೊಲೀಸರು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು