ಭಾನುವಾರ, ಆಗಸ್ಟ್ 18, 2019
26 °C

‘ಒಂದು ರಾಷ್ಟ್ರ ಒಂದು ಕಾರ್ಡ್‌’ ಜಾರಿಗೆ ಸಿದ್ಧತೆ

Published:
Updated:

ನವದೆಹಲಿ: ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ ಒಂದು ರೇಷನ್‌ ಕಾರ್ಡ್‌’ ಯೋಜನೆಯನ್ನು ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಮೂರು ತಿಂಗಳಿಗೆ ಬೇಕಾಗುವಷ್ಟು ಆಹಾರ ಧಾನ್ಯವನ್ನು ಸಂಗ್ರಹಿಸಿಡುವಂತೆ ರಾಜ್ಯಗಳಿಗೆ ಸೋಮವಾರ ಸೂಚನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಗ್ರಾಹಕ ವ್ಯವಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್‌ವಿಲಾಸ್‌ ಪಾಸ್ವಾನ್‌ ಅವರು, ‘ಒಂದು ದೇಶ ಒಂದು ರೇಷನ್‌ ಕಾರ್ಡ್‌’ ಯೋಜನೆ ಜಾರಿಯಾದರೆ ಫಲಾನುಭವಿಯು ದೇಶದ ಯಾವ ರಾಜ್ಯದಲ್ಲಿದ್ದರೂ, ತಮ್ಮ ಪಾಲಿನ ಪಡಿತರವನ್ನು ಪಡೆಯಲು ಸಾಧ್ಯವಾಗಲಿದೆ. ಅವರ ಕುಟುಂಬದ ಇತರ ಸದಸ್ಯರು ತಮ್ಮ ಪಾಲಿನ ಪಡಿತರವನ್ನು ತಮ್ಮ ಊರಿನಲ್ಲಿಯೇ ಪಡೆಯಬಹುದು. ವಲಸೆ ಹೋಗುವ ಕಾರ್ಮಿಕರಿಗೆ ಈ ಯೋಜನೆಯಿಂದ ತುಂಬ ಅನುಕೂಲವಾಗಲಿದೆ’ ಎಂದರು.

Post Comments (+)