ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಿಂದ ಒಂದು ಕೋಟಿ ಮನೆ ಮಂಜೂರು: ಕೇಂದ್ರ ಸಚಿವ ಹರ್ದೀಪ್ ಪುರಿ

Last Updated 27 ಡಿಸೆಂಬರ್ 2019, 20:50 IST
ಅಕ್ಷರ ಗಾತ್ರ

ನವದೆಹಲಿ: ‘ಕೇಂದ್ರವು ಈವರೆಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ನಗರ) (ಪಿಎಂಎವೈ) ಅಡಿಯಲ್ಲಿ ಒಂದು ಕೋಟಿ ಮನೆಗಳನ್ನು ಮಂಜೂರು ಮಾಡಿದೆ’ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಎಸ್‌. ಪುರಿ ಶುಕ್ರವಾರ ತಿಳಿಸಿದ್ದಾರೆ.

‘ಪಿಎಂಎವೈ (ನಗರ) ಅಡಿಯಲ್ಲಿ 6.5 ಲಕ್ಷ ಮನೆಗಳ ನಿರ್ಮಾಣಕ್ಕೆ ಶುಕ್ರವಾರ ಅನುಮೋದನೆ ನೀಡಲಾಗಿದೆ. ಈ ಯೋಜನೆಯಡಿ ಒಟ್ಟು ಒಂದು ಕೋಟಿ ಮನೆಗಳನ್ನು ಈವರೆಗೆ ಮಂಜೂರು ಮಾಡಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಸರ್ಕಾರ ನಿಗದಿಪಡಿಸಿದ 1.12 ಕೋಟಿ ಮನೆಗಳನ್ನು ಮಂಜೂರು ಮಾಡಲಾಗುವುದು’ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಒಟ್ಟು ಮಂಜೂರಾದ ಮನೆಗಳಲ್ಲಿ, 57 ಲಕ್ಷ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿವೆ, ಅದರಲ್ಲಿ 30 ಲಕ್ಷ ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ‘₹1.6 ಲಕ್ಷ ಕೋಟಿ ಕೇಂದ್ರದ ನೆರವಿನ ಜೊತೆಗೆ ಮನೆಗಳ ನಿರ್ಮಾಣಕ್ಕೆ ₹5.7 ಲಕ್ಷ ಕೋಟಿ ಹೂಡಲಾಗಿದೆ. ವಿವಿಧ ಯೋಜನೆಗಳಡಿಯಲ್ಲಿ ಕೇಂದ್ರ ಸರ್ಕಾರ ಪ್ರತಿ ಮನೆಗೆ ₹ 1 ಲಕ್ಷದಿಂದ ₹2.67 ಲಕ್ಷ ನೆರವು ನೀಡಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT