ನವದೆಹಲಿ: ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶನಿವಾರ (ಮೇ 30) ಒಂದು ವರ್ಷ ಪೂರೈಸಲಿದೆ. ಆದರೆ, ಜಗತ್ತನ್ನೇ ಕಾಡುತ್ತಿರುವ ಕೋವಿಡ್–19ರ ಕಾರಣದಿಂದಾಗಿ ಬಿಜೆಪಿಗೆ ಬಹಿರಂಗವಾಗಿ ಸಂಭ್ರಮಿಸಲು ಸಾಧ್ಯವಾಗದಂಥ ಸ್ಥಿತಿ ಇದೆ.

ಪಕ್ಷವು ಈ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದು, ಮುಂದಿನ ಒಂದು ತಿಂಗಳ ಕಾಲ ಫೇಸ್‌ಬುಕ್ ಲೈವ್‌ನಂಥ ‘ಡಿಜಿಟಲ್ ರ್‍ಯಾಲಿ’ಗಳನ್ನು ಆಯೋಜಿಸುವ ಮೂಲಕ ಕಾರ್ಯಕರ್ತರನ್ನು ತಲುಪಲು ಯೋಜನೆ ರೂಪಿಸಿದೆ. ಇದೇ ಸಂದರ್ಭದಲ್ಲಿ ಆಡಳಿತ ಮತ್ತು ವಿರೋಧಪಕ್ಷಗಳ ಆರೋಪ– ಪ್ರತ್ಯಾರೋಪ ರಾಜಕೀಯವೂ ಬಿರುಸುಗೊಂಡಿದೆ.

ವಿರೋಧ ಪಕ್ಷಗಳು ಬಿಜೆಪಿ ವಿರುದ್ಧದ ಟೀಕೆಗಳನ್ನು ತೀವ್ರಗೊಳಿಸಲು ಮುಂದಾಗಿವೆ. ದೇಶದಲ್ಲಿ ಆರೋಗ್ಯ ಸೇವೆ ಒದಗಿಸುವಲ್ಲಿ ಆಗುತ್ತಿರುವ ಲೋಪ, ನಿರುದ್ಯೋಗ ಸಮಸ್ಯೆ ಉಲ್ಬಣ ಹಾಗೂ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿಯ ವಿರುದ್ಧ ಟೀಕಾಸ್ತ್ರಗಳನ್ನು ಪ್ರಯೋಗಿಸಿವೆ.

ಇದಕ್ಕೆ ಪ್ರತಿಯಾಗಿ ಬಿಜೆಪಿಯು ಕಿರು ಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶವನ್ನು ‘ದುರ್ಬಲಗೊಳಿಸುತ್ತಿದ್ದಾರೆ’ ಎಂದು ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.