ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಬಗ್ಗೆ ಆಯೋಗ ನಿಷ್ಕ್ರಿಯ ಎಂದು ಆರೋಪಿಸಿ ಕೋರ್ಟ್‌ ಮೊರೆ ಹೋದ ಕಾಂಗ್ರೆಸ್‌

Last Updated 29 ಏಪ್ರಿಲ್ 2019, 6:11 IST
ಅಕ್ಷರ ಗಾತ್ರ

ನವದೆಹಲಿ: ನೀತಿ ಸಂಹಿತೆ ಉಲ್ಲಂಘಿಸಿಭಾಷಣಗಳನ್ನು ಮಾಡಿದರೂ ಚುನಾವಣಾ ಆಯೋಗ ನರೇಂದ್ರ ಮೋದಿ ವಿಚಾರದಲ್ಲಿ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಸೋಮವಾರಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ಮೋದಿ ವಿರುದ್ಧ ಈ ವರೆಗೆ ದಾಖಲಾಗಿರುವ ಪ್ರಕರಣಗಳ ಕುರಿತು ಚುನಾವಣೆ ಆಯೋಗ ಇನ್ನು 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಕಾಂಗ್ರೆಸ್‌ ಸಂಸದೆ ಸುಷ್ಮಿತಾ ದೇವ್‌ ಅವರು ಇಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

‘ಮತಗಳ ಧ್ರುವೀಕರಣಕ್ಕಾಗಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಬಿಜೆಪಿ ಸಮಾವೇಶಗಳಲ್ಲಿ ಧ್ವೇಷ ಭಾಷಣ ಮಾಡಿದ್ದಾರೆ. ಪ್ರಚಾರದ ವೇಳೆಸೇನೆಯ ವಿಚಾರಗಳನ್ನೂ ಪ್ರಸ್ತಾಪಿಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ,’ಎಂದು ಸುಷ್ಮಿತಾ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಅರ್ಜಿಯನ್ನು ಮಾನ್ಯ ಮಾಡಿರುವ ಸುಪ್ರೀಂ ಕೋರ್ಟ್‌, ಮಂಗಳವಾರಕ್ಕೆ ವಿಚಾರಣೆ ನಿಗದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT