ಹೈಕೋರ್ಟ್‌ಗಳಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ಕೇವಲ 73

7
ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಒಟ್ಟು 670 ನ್ಯಾಯಮೂರ್ತಿ

ಹೈಕೋರ್ಟ್‌ಗಳಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ಕೇವಲ 73

Published:
Updated:

ನವದೆಹಲಿ: ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಒಟ್ಟು 670 ನ್ಯಾಯಾಮೂರ್ತಿಗಳಲ್ಲಿ ಮಹಿಳೆಯರ ಸಂಖ್ಯೆ ಕೇವಲ 73 ಎಂದು ಸಂಸದೀಯ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. 

ಮಾರ್ಚ್‌ 23, 2018ರ ಪ್ರಕಾರ 24 ಹೈಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ಮಂಜೂರಾದ ಹುದ್ದೆಗಳ ಪ್ರಮಾಣ 1,079. ಆದರೆ ಈಗಿರುವುದು ಕೇವಲ 670. ಉಳಿದ ಹುದ್ದೆಗಳು ಖಾಲಿ ಇವೆ ಎಂಬ ಅಂಶವನ್ನು ವರದಿಯಲ್ಲಿ ತಿಳಿಸಲಾಗಿದೆ. 

ಮಹಿಳೆ ಮತ್ತು ಅಲ್ಪಸಂಖ್ಯಾತ ಸಮುದಾಯದವರಿಗೆ ಸಮರ್ಪಕ ಪ್ರಾತಿನಿಧ್ಯ ನೀಡದ ಕುರಿತು  ಪ್ರತಿಕ್ರಿಯಿಸಿರುವ ಸರ್ಕಾರ, ನ್ಯಾಯಮೂರ್ತಿಗಳ ನೇಮಕಾತಿಗೆ ಪ್ರಸ್ತಾವಗಳನ್ನು ಕಳುಹಿಸುವಾಗ ಸೂಕ್ತ ಅಭ್ಯರ್ಥಿಗಳಿಗೆ ಮನ್ನಣೆ ನೀಡಬೇಕು ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿದೆ. ಪರಿಶಿಷ್ಟ ಜಾತಿ, ಬುಡಕಟ್ಟು, ಇತರ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಮತ್ತು ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ತಿಳಿಸಿದೆ.

ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆ ತ್ವರಿತಗೊಳಿಸುವ ಅಗತ್ಯವಿದ್ದು, ಮುಖ್ಯಮಂತ್ರಿ ಮತ್ತು ರಾಜ್ಯಪಾಲರಿಗೆ ನೀಡಿರುವ ಆರು ವಾರಗಳ ಕಾಲವಧಿಯನ್ನು ಕಡಿತಗೊಳಿಸಬೇಕು ಎಂದು ಸಮಿತಿ ತಿಳಿಸಿದೆ. ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಅನಗತ್ಯ ವಿಳಂಬ ಕಡಿತಗೊಳಿಸಿ, ವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ಅಭಿಪ್ರಾಯಪಟ್ಟಿದೆ.

ಸಮಾಜದ ಎಲ್ಲಾ ವರ್ಗಗಳಿಗೂ ಉನ್ನತ ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯೋಚಿತ ಪ್ರಾತಿನಿಧ್ಯ ನೀಡಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಈ ವರದಿಯ ಉದ್ದೇಶ ಎಂದು ಸರ್ಕಾರ ತಿಳಿಸಿದೆ.   

24 ಹೈಕೋರ್ಟ್‌ಗಳ ವರದಿಯನ್ನು ಮಾತ್ರವೇ ಸಮಿತಿ ನೀಡಿದೆ. ಜನವರಿ 1ರಿಂದ  ಆಂಧ್ರಪ್ರದೇಶ ಹೈಕೋರ್ಟ್‌ ರಚನೆಯಿಂದ ದೇಶದಲ್ಲಿನ ಹೈಕೋರ್ಟ್‌ಗಳ ಸಂಖ್ಯೆ 25ಕ್ಕೆ ಏರಿದೆ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !