‘ವಿ.ವಿ.ಯಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನಾ ಕೇಂದ್ರ ಸ್ಥಾಪಿಸಿ’

7
ಗೋವಾ ವಿ.ವಿ. ಘಟಿಕೋತ್ಸವದಲ್ಲಿ ರಾಜ್ಯಪಾಲೆ ಸಲಹೆ

‘ವಿ.ವಿ.ಯಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನಾ ಕೇಂದ್ರ ಸ್ಥಾಪಿಸಿ’

Published:
Updated:

ಪಣಜಿ: ಕ್ಷುಲ್ಲಕ ಕಾರಣಗಳಿಗೆ ವೈವಾಹಿಕ ಸಂಬಂಧ ಮುರಿದುಕೊಳ್ಳುವುದಿಲ್ಲ ಎಂದು ಪ್ರಮಾಣ ಸ್ವೀಕರಿಸುವಂತೆ ರಾಜ್ಯಪಾಲೆ ಮೃದುಲಾ ಸಿನ್ಹಾ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಗೋವಾ ವಿಶ್ವವಿದ್ಯಾಲಯದಲ್ಲಿ ವಿವಾಹಪೂರ್ವ ಆಪ್ತಸಮಾಲೋಚನಾ ಕೇಂದ್ರ ಸ್ಥಾ‍ಪಿಸುವಂತೆ ಅವರು ಸಲಹೆ ನೀ‌ಡಿದ್ದಾರೆ.

ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿನ್ಹಾ, ‘ಕುಟುಂಬ ನಡೆಸುವುದು ಹೇಗೆ ಎಂಬುದನ್ನು ಯುವಕರು ತಿಳಿಯುವುದು ಅಗತ್ಯ. ಮದುವೆಗೆ ಸಂಬಂಧಿಸಿದಂತೆ ಅವರ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ಮತ್ತು ಯಶಸ್ವಿ ವೈವಾಹಿಕ ಜೀವನ ನಡೆಸಲು ಇಂತಹ ಕೇಂದ್ರ ಸ್ಥಾಪನೆ ಅತ್ಯಗತ್ಯ’ ಎಂದು ಪ್ರತಿಪಾದಿಸಿದರು.

‘ತಂದೆ–ತಾಯಿಯನ್ನು ವೃದ್ಧಾಶ್ರಮಕ್ಕೆ ಕಳುಹಿಸುವುದಿಲ್ಲ’, ‘ಪರಸ್ಪರರನ್ನು ನಾವು ಗೌರವಿಸುತ್ತೇವೆ’, ‘ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಡುತ್ತೇವೆ’, ‘ನಮ್ಮ ಸುತ್ತಲಿನ ವಾತಾವರಣವನ್ನು ಶುಚಿಯಾಗಿ ಇಟ್ಟುಕೊಳ್ಳುತ್ತೇವೆ’, ‘ಯಾವುದೇ ದುರಭ್ಯಾಸಗಳಿಗೆ ಬಲಿಯಾಗುವುದಿಲ್ಲ’ ಎಂದು ವಿದ್ಯಾರ್ಥಿಗಳು ಪ್ರಮಾಣ ಮಾಡಬೇಕು ಎಂದರು.

ರಾಷ್ಟ್ರಪತಿ ರಾಮನಾಥ ಕೋವಿಂದ್‌, ಮುಖ್ಯಮಂತ್ರಿ ಮನೋಹರ ಪರ್ರೀಕರ್‌ ಅವರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !