ಮಂಗಳವಾರ, ಆಗಸ್ಟ್ 20, 2019
22 °C

ಕೇರಳದಲ್ಲಿ ಮಳೆ: ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಭಾನುವಾರದವರೆಗೂ ಬಂದ್‌

Published:
Updated:

ತಿರುವನಂತಪುರ: ಕೇರಳದ ಕೆಲವೆಡೆ ಭಾರಿ ಮಳೆಯಾಗುತ್ತಿದ್ದು ಕೊಚ್ಚಿ ವಿಮಾನ ನಿಲ್ದಾಣವನ್ನು ಭಾನುವಾರ(ಆ.11)ದವರೆಗೂ ಬಂದ್‌ ಮಾಡಲಾಗಿದೆ.

ಪೆರಿಯಾರ್ ನದಿ ಅಪಾಯಮಟ್ಟ ಮೀರಿ ಹರಿಯುತ್ತಿರುವುದರಿಂದ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೂ ಬಂದ್‌ ಮಾಡಲಾಗಿದೆ ಎಂದು ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಇಡುಕ್ಕಿ, ಮಲ‍ಪ್ಪುರಂ, ಕೊಯಿಕೋಡ್‌, ಕಣ್ಣೂರು, ವಯನಾಡ್‌ ಜಿಲ್ಲೆಗಳಲ್ಲಿ ’ರೆಡ್‌ ಅಲರ್ಟ್‌‘ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿನ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜಲಾಶಯಗಳಲ್ಲಿ ಒಳ ಹರಿವು ಹೆಚ್ಚಾಗಿದೆ. ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ.

ಕೇರಳದ 12 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

ಕಳೆದ ಜೂನ್‌ 6ರಿಂದ ಆರಂಭವಾದ ಮುಂಗಾರಿಗೆ ಇಲ್ಲಿಯವರೆಗೆ ರಾಜ್ಯದಲ್ಲಿ 29 ಜನರು ಸತ್ತಿದ್ದಾರೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Post Comments (+)