ಎನ್‌ಆರ್‌ಸಿ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಒತ್ತಾಯ

7

ಎನ್‌ಆರ್‌ಸಿ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಒತ್ತಾಯ

Published:
Updated:

ನವದೆಹಲಿ: ‘ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪಟ್ಟಿಯಿಂದ ಯಾವೊಬ್ಬ ಭಾರತೀಯ ಪ್ರಜೆಯನ್ನೂ ಕೈಬಿಡದಂತೆ ನೋಡಿಕೊಳ್ಳಬೇಕು’ ಎಂದು ವಿರೋಧ ‍ಪಕ್ಷಗಳ ನಿಯೋಗ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಆಗ್ರಹಿಸಿದೆ.

ಕಾಂಗ್ರೆಸ್‌, ಟಿಎಂಸಿ ಹಾಗೂ ಎಡಪಕ್ಷಗಳ ಮುಖಂಡರನ್ನು ಒಳಗೊಂಡ ನಿಯೋಗ ರಾಷ್ಟ್ರಪತಿ ಅವರಿಗೆ ಈ ಸಂಬಂಧ ಗುರುವಾರ ಮನವಿ ಸಲ್ಲಿಸಿತು.

‘ದೇಶ ಪಾಲಿಸಿಕೊಂಡು ಬರುತ್ತಿರುವ ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ ಮೌಲ್ಯಗಳನ್ನು ಕೇಂದ್ರ ಸರ್ಕಾರ ಕಡೆಗಣಿಸಿದೆ. ಎನ್‌ಆರ್‌ಸಿಯಿಂದಾಗಿ 40 ಲಕ್ಷ ಭಾರತೀಯರನ್ನು ಹೊರಹಾಕುವ ಪರಿಸ್ಥಿತಿ ಬಂದೊದಗಿದೆ’ ಎಂದು ನಿಯೋಗ ಮನವಿಪತ್ರದಲ್ಲಿ ಟೀಕಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !