ಸೋಮವಾರ, ಸೆಪ್ಟೆಂಬರ್ 27, 2021
21 °C
ಅರ್ಜಿಗೆ ಸಹಿ ಹಾಕಿರುವ ಪ್ರತಿಪಕ್ಷಗಳ ಎಲ್ಲ ನಾಯಕರು ಹಾಜರಿರುವ ಸಾಧ್ಯತೆ

ಮತಯಂತ್ರಕ್ಕೆ ವಿವಿಪ್ಯಾಟ್ ತಾಳೆ ಹೆಚ್ಚಿಸುವ ಮನವಿ: ಸುಪ್ರೀಂನಲ್ಲಿ ಇಂದು ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಲೋಕಸಭೆ ಚುನಾವಣೆಯ ಮತ ಎಣಿಕೆ ವೇಳೆ ಪ್ರತಿ ವಿಧಾನಸಭಾ ಕ್ಷೇತ್ರದ ಶೇ 50ರಷ್ಟು ವಿವಿಪ್ಯಾಟ್‌ ಮತಚೀಟಿಗಳನ್ನು ಮತಯಂತ್ರಗಳಿಗೆ ತಾಳೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಪ್ರತಿಪಕ್ಷಗಳು ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಅರ್ಜಿಗೆ ಸಹಿ ಹಾಕಿರುವ ಪ್ರತಿಪಕ್ಷಗಳ ಎಲ್ಲ ನಾಯಕರು ವಿಚಾರಣೆ ವೇಳೆ ಹಾಜರಿರಲಿದ್ದಾರೆ ಎನ್ನಲಾಗಿದೆ.

ವಿವಿಪ್ಯಾಟ್‌ ಮತಚೀಟಿಗಳನ್ನು ಮತಯಂತ್ರಗಳಿಗೆ ತಾಳೆ ಮಾಡುವ ವಿಚಾರದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಪ್ರತಿಪಕ್ಷಗಳು ಹಿಂದೆಯೂ ಈ ಮನವಿ ಮಾಡಿದ್ದವು. ಆ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠವು, ತಾಳೆಮಾಡುವ ವಿವಿಪ್ಯಾಟ್‌ಗಳ ಸಂಖ್ಯೆಯನ್ನು ಹೆಚ್ಚಿಸಿದರೆ ಫಲಿತಾಂಶ ಘೋಷಣೆಗೆ ವಿಳಂಬವಾಗಬಹುದು ಎಂದಿತ್ತು. ಈ ಕಾರಣಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರದ ಕನಿಷ್ಠ 5 ಮತಗಟ್ಟೆಗಳ ವಿವಿಪ್ಯಾಟ್‌ಗಳನ್ನು ಮತಯಂತ್ರಕ್ಕೆ ತಾಳೆ ಮಾಡುವಂತೆ ಏಪ್ರಿಲ್‌ 8ರಂದು ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಇದನ್ನೂ ಓದಿ: ತಾಳೆ ಮಾಡುವ ವಿವಿಪ್ಯಾಟ್‌ ಸಂಖ್ಯೆ ಹೆಚ್ಚಿಸಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ​

ಆದರೆ, ಮೊದಲ 3 ಹಂತಗಳ ಚುನಾವಣೆಯಲ್ಲಿ ಅನೇಕ ಮತ ಯಂತ್ರಗಳು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂಬ ದೂರು ದಾಖಲಾಗಿವೆ. ಹೀಗಾಗಿ ಏಪ್ರಿಲ್ 8ರ ಸೂಚನೆಯನ್ನು ಮರುಪರಿಶೀಲಿಸುವಂತೆ ಪ್ರತಿಪಕ್ಷಗಳು ಪುನಃ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿವೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಎನ್‌ಸಿ‍ಪಿ ನಾಯಕ ಶರದ್ ಪವಾರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಎಸ್‌ಪಿ ನಾಯಕ ಅಖಿಲೇಶ್ ಯಾದವ್, ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಸೇರಿ 21 ಪಕ್ಷಗಳ ನಾಯಕರು ಮರುಪರಿಶೀಲನಾ ಅರ್ಜಿಗೆ ಸಹಿ ಹಾಕಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು