ರಾಹುಲ್‌, ಪವಾರ್‌, ಮಾಯಾ ಭೇಟಿಯಾದ ನಾಯ್ಡು

ಮಂಗಳವಾರ, ಜೂನ್ 25, 2019
26 °C
ಬಿರುಸುಗೊಂಡ ರಾಜಕೀಯ ಚಟುವಟಿಕೆ

ರಾಹುಲ್‌, ಪವಾರ್‌, ಮಾಯಾ ಭೇಟಿಯಾದ ನಾಯ್ಡು

Published:
Updated:
Prajavani

ನವದೆಹಲಿ: ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಬಾಕಿ ಇರುವಂತೆಯೇ ಟಿಡಿಪಿ
ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವನ್ನು ತೀವ್ರಗೊಳಿಸಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಸಿಪಿಐ ಮುಖಂಡ ಜಿ. ಸುಧಾಕರ ರೆಡ್ಡಿ ಹಾಗೂ ಡಿ. ರಾಜ ಅವರನ್ನು ಶನಿವಾರ ದೆಹಲಿಯಲ್ಲಿ ಭೇಟಿಮಾಡಿ ಮಾತುಕತೆ ನಡೆಸಿದ ನಾಯ್ಡು, ಅಲ್ಲಿಂದ ಲಖನೌಗೆ ಧಾವಿಸಿ ಎಸ್‌ಪಿ ಮುಖಂಡ ಅಖಿಲೇಶ್‌ ಯಾದವ್‌ ಹಾಗೂ ಬಿಎಸ್‌ಪಿ ನಾಯಕಿ ಮಾಯಾವತಿ ಅವರನ್ನು ಭೇಟಿ ಮಾಡಿದ್ದಾರೆ.

ಬಿಜೆಪಿಯೇತರ ಪಕ್ಷಗಳೆಲ್ಲ ಒಂದಾಗಿ ಒಂದು ಬಲಿಷ್ಠ ಮೈತ್ರಿಕೂಟ ಸ್ಥಾಪಿಸುವ ಬಗ್ಗೆ ನಾಯ್ಡು ಅವರು ರಾಹುಲ್‌ ಜೊತೆ
ಚರ್ಚಿಸಿದ್ದಾರೆ. ಈ ಹಿಂದೆಯೇ ನಾಯ್ಡು ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಎಎಪಿ ಮುಖಂಡ ಕೇಜ್ರಿವಾಲ್‌, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಜೊತೆ ಮಾತುಕತೆ ನಡೆಸಿದ್ದರು.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ವಿರೋಧ ಪಕ್ಷಗಳೆಲ್ಲ ಒಗ್ಗಟ್ಟಾಗಬೇಕಾದ ಅನಿವಾರ್ಯತೆಯನ್ನು ವಿವಿಧ ಪಕ್ಷಗಳ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿರುವ ನಾಯ್ಡು, ಎನ್‌ಡಿಎಗೆ ಬಹುಮತ ಬಾರದಿದ್ದ ಪಕ್ಷದಲ್ಲಿ ನಾವೇನು
ಮಾಡಬೇಕು ಎಂಬ ಬಗ್ಗೆ ಯೋಜನೆಯೊಂದನ್ನು ಸಿದ್ಧಪಡಿಸಿಡುವಂತೆ ರಾಹುಲ್‌ ಅವರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಚುನಾವಣೋತ್ತರ ಸಾಧ್ಯತೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮೇ 23ರಂದು
ವಿರೋಧಪಕ್ಷಗಳ ನಾಯಕರ ಸಭೆಕರೆದಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಚಂದ್ರಬಾಬು ನಾಯ್ಡು ವಿವಿಧ ಪಕ್ಷಗಳ ನಾಯಕರನ್ನು ಭೇಟಿಮಾಡುತ್ತಿದ್ದಾರೆ.

ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಪಕ್ಷವು ಈಚಿನವರೆಗೂ ಎನ್‌ಡಿಎ ಭಾಗವಾಗಿತ್ತು. ಲೋಕಸಭಾ ಚುನಾವಣೆ ಘೋಷಣೆಯಾಗುವುದಕ್ಕೂಕೆಲವೇ ದಿನಗಳ ಹಿಂದೆ ಟಿಡಿಪಿ ಎನ್‌ಡಿಎಯಿಂದ ಹೊರಬಂದಿತ್ತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 0

  Frustrated
 • 6

  Angry

Comments:

0 comments

Write the first review for this !