ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರಕ್ಕೆ ವಿಪಕ್ಷಗಳ ನಿಯೋಗ

Last Updated 23 ಆಗಸ್ಟ್ 2019, 19:08 IST
ಅಕ್ಷರ ಗಾತ್ರ

ನವದೆಹಲಿ:ವಿರೋಧ ಪಕ್ಷಗಳ ನಿಯೋಗವು ಶನಿವಾರ ಶ್ರೀನಗರಕ್ಕೆ ಭೇಟಿ ನೀಡಲಿದೆ. ಅಲ್ಲಿ ಜನರ ಜತೆ ಸಂವಾದ ನಡೆಸಲು ವಿರೋಧ ಪಕ್ಷಗಳ ನಾಯಕರು ಸಿದ್ಧತೆ ನಡೆಸಿದ್ದಾರೆ. ಅವಕಾಶ ನೀಡಿದರೆ ಜಮ್ಮು ಮತ್ತು ಕಾಶ್ಮೀರದ ಬೇರೆ ಪ್ರದೇಶಗಳಿಗೂ ನಿಯೋಗ ಭೇಟಿ ನೀಡಲಿದೆ.

ಕಾಂಗ್ರೆಸ್‌ನ ರಾಹುಲ್ ಗಾಂಧಿ, ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ, ಸಿಪಿಎಂನ ಸೀತಾರಾಂ ಯೆಚೂರಿ, ಸಿಪಿಐನ ಡಿ.ರಾಜಾ, ಆರ್‌ಜೆಡಿಯ ಮನೋಜ್ ಝಾ, ಎನ್‌ಸಿಪಿಯ ದಿನೇಶ್ ತ್ರಿವೇದಿ, ಮತ್ತು ಡಿಎಂಕೆಯ ತಿರುಚ್ಚಿ ಶಿವ ಈ ನಿಯೋಗದಲ್ಲಿ ಇರಲಿದ್ದಾರೆ. ಟಿಎಂಸಿ ನಾಯಕರೂ ಈ ನಿಯೋಗದಲ್ಲಿ ಇರಲಿದ್ದಾರೆ ಎಂದು ಮೂಲಗಳು ಹೇಳಿವೆ.

ವಿಶೇಷಾಧಿಕಾರ ಅಸಿಂಧುಗೊಳಿಸಿದ ನಂತರ ಯಾವ ರಾಜಕೀಯ ನಾಯಕರೂ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲು ಸರ್ಕಾರ ಅವಕಾಶ ನೀಡಿಲ್ಲ. ರಾಜ್ಯಕ್ಕೆ ಭೇಟಿ ನೀಡಿ ಎಂದು ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಈಚೆಗೆ ರಾಹುಲ್ ಗಾಂಧಿ ಅವರಿಗೆ ಸವಾಲು ಹಾಕಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT