ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕತಾವಾದಿ ನಾಯಕರಿಗೆ ಆಹ್ವಾನ ನೀಡಿದ್ದಕ್ಕೆ ಆಕ್ಷೇಪ; ಭಾರತ ಬಹಿಷ್ಕಾರ

Last Updated 22 ಮಾರ್ಚ್ 2019, 20:36 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಹೈಕಮಿಷನ್‌ ಕಚೇರಿಯಲ್ಲಿ ಶನಿವಾರ ನಡೆಯಲಿರುವ ಪಾಕಿಸ್ತಾನ ರಾಷ್ಟ್ರೀಯ ದಿನವನ್ನು ಬಹಿಷ್ಕರಿಸುವುದಾಗಿ ಭಾರತ ತಿಳಿಸಿದೆ.

ರಾಷ್ಟ್ರೀಯ ದಿನಕ್ಕೆ ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕತಾವಾದಿ ಹುರಿಯತ್‌ ನಾಯಕರನ್ನು ಆಹ್ವಾನಿಸಿರುವ ಕ್ರಮ ವಿರೋಧಿಸಿ ಭಾರತ ಈ ನಿರ್ಧಾರ ಕೈಗೊಂಡಿದೆ. ಕಳೆದ ಕೆಲವು ವರ್ಷಗಳಿಂದ ಕೇಂದ್ರ ಸಚಿವರೊಬ್ಬರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು.

ಪಾಕಿಸ್ತಾನದ ರಾಷ್ಟ್ರೀಯ ದಿನಕ್ಕೆ ಯಾವುದೇ ಅಧಿಕೃತ ಪ್ರತಿನಿಧಿಯನ್ನು ಕಳುಹಿಸದಿರಲು ಭಾರತ ನಿರ್ಧರಿಸಿದೆ. ಅಧಿಕಾರಿಗಳು ಸಹ ಈ ಕಾರ್ಯಕ್ರಮದಿಂದ ದೂರ ಉಳಿಯಲಿದ್ದಾರೆ. ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್‌ ಕುಮಾರ್‌ ತಿಳಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಇದೇ ರೀತಿಯ ಕಾರ್ಯಕ್ರಮದಲ್ಲೂ ಭಾರತದ ಯಾವುದೇ ಪ್ರತಿನಿಧಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT