‘ಕೈ’ ತಪ್ಪಲಿದೆಯೇ ವಿಪಕ್ಷ ನಾಯಕನ ಸ್ಥಾನ?

ಮಂಗಳವಾರ, ಜೂನ್ 18, 2019
29 °C

‘ಕೈ’ ತಪ್ಪಲಿದೆಯೇ ವಿಪಕ್ಷ ನಾಯಕನ ಸ್ಥಾನ?

Published:
Updated:

ನವದೆಹಲಿ: 17ನೇ ಲೋಕಸಭೆಯಲ್ಲಿ ಕೇವಲ 52 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್‌ಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಿಗುತ್ತದೆಯೇ ಎಂಬ ಚರ್ಚೆ ಈಗ ಮತ್ತೆ ಚಾಲ್ತಿಗೆ ಬಂದಿದೆ. ಲೋಕಸಭೆಯ ಒಟ್ಟು ಸ್ಥಾನಗಳಲ್ಲಿ ಕನಿಷ್ಠ ಶೇ 10ರಷ್ಟಾದರೂ (55) ಸ್ಥಾನಗಳನ್ನು ಹೊಂದಿದ್ದರೆ ಅಧಿಕೃತ ವಿರೋಧ ಪಕ್ಷದ ನಾಯಕನ ಸ್ಥಾನ ದೊರೆಯುತ್ತದೆ.

ಅಗತ್ಯ ಸಂಖ್ಯಾಬಲ ಇಲ್ಲದ ಕಾರಣ ಕಾಂಗ್ರೆಸ್‌ಗೆ ಈ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನ ಸಿಗುವ ಸಾಧ್ಯತೆ ಇಲ್ಲ. 2014ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 44 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಹೀಗಾಗಿ ವಿರೋಧ ಪಕ್ಷದ ಸ್ಥಾನ ನೀಡಲು ಎನ್‌ಡಿಎ ಸರ್ಕಾರ ನಿರಾಕರಿಸಿತ್ತು.

ಕೇಂದ್ರ ಸರ್ಕಾರದ ಅತ್ಯಂತ ಪ್ರಮುಖ ನೇಮಕಾತಿ ಸಮಿತಿಗಳಲ್ಲಿ ವಿರೋಧ ಪಕ್ಷದ ನಾಯಕನಿಗೆ ಮಹತ್ವದ ಸ್ಥಾನವಿದೆ. ಲೋಕಪಾಲ, ಕೇಂದ್ರ ಜಾಗೃತ ಆಯೋಗ, ಸಿಬಿಐ ನಿರ್ದೇಶಕರ ನೇಮಕಾತಿಯಲ್ಲಿ ವಿರೋಧ ಪಕ್ಷದ ನಾಯಕ ಮಹತ್ವದ ಪಾತ್ರವಹಿಸುತ್ತಾರೆ. 2014ರಲ್ಲಿ ಕಾಂಗ್ರೆಸ್‌ನ ತೀವ್ರ ಆಗ್ರಹದ ನಂತರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸಮಿತಿಗಳಲ್ಲಿ ಸ್ಥಾನ ಕಲ್ಪಿಸಲಾಯಿತು. ಆದರೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಿರಲಿಲ್ಲ. ಆದರೆ ಖರ್ಗೆ ಅವರಿಗೆ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕನ ಸ್ಥಾನ ನೀಡಲಾಗಿತ್ತು.

ಈ ಬಾರಿ ಈ ಸ್ಥಾನ ಯಾರಿಗೆ ಸಿಗಲಿದೆ ಎಂಬುದೂ ಈಗ ಚರ್ಚೆಯ ವಿಷಯವಾಗಿದೆ. ಖರ್ಗೆ ಅವರು ಸೋತಿರುವುದರಿಂದ ಲೋಕಸಭೆಯಲ್ಲಿ ಅವರು ಇಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ಸೋನಿಯಾ ಗಾಂಧಿ ಅವರು ಈ ಜವಾಬ್ದಾರಿ ಹೊರುವ ಸಾಧ್ಯತೆ ಕಡಿಮೆ. ಪಕ್ಷ ಹೀನಾಯವಾಗಿ ಸೋತಿರುವುದರಿಂದ ರಾಹುಲ್ ಈ ಹೊಣೆ ಹೊರುವ ಸಾಧ್ಯತೆ ಕಡಿಮೆ. ಚುನಾವಣೆಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರೂ ಸೋತಿರುವುದರಿಂದ ಕಾಂಗ್ರೆಸ್‌ ಸಂಸದೀಯ ಪಕ್ಷದಲ್ಲಿ ಹಿರಿಯ ಮತ್ತು ಪ್ರಬಲ ನಾಯಕರು ಉಳಿದಿಲ್ಲ.

ಹೀಗಾಗಿ ತಿರುವನಂತಪುರ ಸಂಸದ ಶಶಿ ತರೂರ್ ಅಥವಾ ಆನಂದಪುರ ಸಾಹಿಬ್‌ ಸಂಸದ ಮನೀಷ್ ತಿವಾರಿ ಅವರು ಈ ಹೊಣೆ ಹೊರುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 31

  Happy
 • 6

  Amused
 • 3

  Sad
 • 4

  Frustrated
 • 4

  Angry

Comments:

0 comments

Write the first review for this !