ಶನಿವಾರ, ಮೇ 30, 2020
27 °C

ಅಂಪನ್ ಚಂಡಮಾರುತ: ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಪ್ರತಿಪಕ್ಷಗಳ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Uprooted trees lying on a street due to Super Cyclone Amphan

ನವದೆಹಲಿ: ಅಂಪನ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಸಂಭವಿಸಿರುವ ಹಾನಿಯನ್ನು ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ 22 ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಚಂಡಮಾರುತದಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯಗಳಿಗೆ ಹೆಚ್ಚಿನ ಸಹಾಯ ನೀಡಬೇಕು ಎಂದೂ ಆಗ್ರಹಿಸಿವೆ.

ಈ ವಿಚಾರವಾಗಿ ಪ್ರತಿಪಕ್ಷಗಳ ಮುಖಂಡರು ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದಾರೆ. ಚಂಡಮಾರುತದಿಂದ ಸಂಕಷ್ಟಕ್ಕೀಡಾದವರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: 

‘ಅಂಪನ್ ಚಂಡಮಾರುತದಿಂದ ತತ್ತರಿಸಿದ ಪಶ್ಚಿಮ ಬಂಗಾಳ ಮತ್ತು ಒಡಿಶಾದ ಸರ್ಕಾರಗಳು ಮತ್ತು ಜನರಿಗೆ ನಮ್ಮ ಬೆಂಬಲ ಸದಾ ಇದೆ’ ಎಂದು ಪ್ರತಿಪಕ್ಷಗಳು ಕೈಗೊಂಡಿರುವ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಕೊರೊನಾ ವೈರಸ್‌ ಸಂಕಟದ ಬೆನ್ನಲ್ಲೇ ಅಂಪನ್ ಚಂಡಮಾರುತವೂ ಅಪ್ಪಳಿಸಿದ್ದು ಸಮಸ್ಯೆಯನ್ನು ದುಪ್ಪಟ್ಟುಗೊಳಿಸಿದೆ. ಸಾಂಕ್ರಾಮಿಕದ ವಿರುದ್ಧದ ಜನರ ಉತ್ಸಾಕ್ಕೆ ತಡೆಯೊಡ್ಡಿದೆ ಎಂದೂ  ನಿರ್ಣಯದಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು