ಸೋಮವಾರ, ಜೂನ್ 14, 2021
26 °C

ಸಿಎಎ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವ ವಿಪಕ್ಷಗಳು: ಅಮಿತ್‌ ಶಾ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ವಿರೋಧ ಪಕ್ಷಗಳು ತಪ್ಪು ಮಾಹಿತಿ ಹರಡುತ್ತಿರುವುದರಿಂದ ದೇಶದಲ್ಲಿ ಹಿಂಸಾಚಾರ ನಡೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಪಿಸಿದ್ದಾರೆ.

ಒಡಿಶಾದ ಭುವನೇಶ್ವರದಲ್ಲಿ ಮಾತನಾಡಿರುವ ಅವರು, ’ಬಿಎಸ್ಪಿ, ಎಸ್ಪಿ, ಕಮ್ಯುನಿಷ್ಟ್ ಪಕ್ಷ, ಕಾಂಗ್ರೆಸ್‌ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳು ಸಿಎಎಯನ್ನು ವಿರೋಧಿಸುತ್ತಿವೆ. ಈ ಕಾಯ್ದೆಯಿಂದ ಅಲ್ಪಸಂಖ್ಯಾತರು ತಮ್ಮ ಪೌರತ್ವ ಕಳೆದುಕೊಳ್ಳಲಿದ್ದಾರೆಂದು ಅವರು ಹೇಳುತ್ತಿದ್ದಾರೆ. ಅವರೇಕೆ ಸುಳ್ಳಾಡುತ್ತಿದ್ದಾರೆ? ಸಿಎಎಯಿಂದ ಪೌರತ್ವ ಸಿಗಲಿದೆಯೇ ಹೊರತು ಯಾರ ಪೌರತ್ವವೂ ಹೋಗುವುದಿಲ್ಲ’ ಎಂದು ತಿಳಿಸಿದ್ದಾರೆ.

ಇದೇ ವೇಳೆ ಭಾರತದ ಯಾವುದೇ ಮುಸ್ಲಿಮನೂ ಪೌರತ್ವ ಕಳೆದುಕೊಳ್ಳುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

‘ಈ ಕಾಯ್ದೆಯಿಂದ ಭಾರತದ ಒಬ್ಬನೇ ಒಬ್ಬ ಮುಸ್ಲಿಮನೂ ಪೌರತ್ವ ಕಳೆದುಕೊಳ್ಳುವುದಿಲ್ಲ. ಈ ವಿಚಾರವನ್ನು ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ‘ ಎಂದು ಅಮಿತ್‌ ಶಾ ಸ್ಪಷ್ಟಪಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು