ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ನೀಡದಂತೆ ಆದೇಶ

Last Updated 2 ಏಪ್ರಿಲ್ 2020, 17:21 IST
ಅಕ್ಷರ ಗಾತ್ರ

ಶ್ರೀನಗರ: ವೈದ್ಯರು ಹಾಗೂ ಆರೋಗ್ಯ ಸೇವಾ ಕಾರ್ಯಕರ್ತರು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಾಹಿತಿಯನ್ನು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್‌ ಸೋಂಕಿನ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಮಾಸ್ಕ್‌, ಗೌನ್‌, ಹಾಸಿಗೆ ಹಾಗೂ ವೆಂಟಿಲೇಟರ್‌ಗಳ ಕೊರತೆಯ ಮಾಹಿತಿಯನ್ನು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಜತೆ ಹಂಚಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಕಾಶ್ಮೀರದ ಆರೋಗ್ಯ ಸೇವೆಗಳ ನಿರ್ದೇಶಕ ಡಾ.ಸಮೀರ್‌ ಮ್ಯಾಟೊ ಈ ಆದೇಶ ಹೊರಡಿಸಿದ್ದಾರೆ.

‘ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಅದನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ಸೋಂಕು ತಡೆಗೆ ಶ್ರಮಿಸುತ್ತಿರುವ ಸರ್ಕಾರದ ಕ್ರಮವನ್ನು ಟೀಕಿಸಬಾರದು’ ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT