ಶುಕ್ರವಾರ, ಡಿಸೆಂಬರ್ 13, 2019
26 °C

ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ: ಜಾಮೀನಿಗಾಗಿ ಸುಪ್ರೀಂ ಕದತಟ್ಟಿದ ಚಿದಂಬರಂ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಪಿ. ಚಿದಂಬರಂ

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಕಾಂಗ್ರೆಸ್ ಹಿರಿಯ ಮುಖಂಡ  ಪಿ.ಚಿದಂಬರಂ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ನವೆಂಬರ್ 15ರಂದು ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು.

ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ಅವರು ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದ ನ್ಯಾಯಪೀಠದ ಮುಂದೆ ಜಾಮೀನು ವಿಚಾರ ಪ್ರಸ್ತಾಪಿಸಿದ್ದು, ಮಂಗಳವಾರ ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಅರ್ಜಿದಾರರು 90 ದಿನಗಳಿಂದ ಜೈಲಿನಲ್ಲಿದ್ದು, ಅವರ ಜಾಮೀನು ಮನವಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ ಎಂದೂ ನ್ಯಾಯಪೀಠಕ್ಕೆ ಕಪಿಲ್ ಸಿಬಲ್ ಮಾಹಿತಿ ನೀಡಿದ್ದಾರೆ. ಅರ್ಜಿಯನ್ನು ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ.

ಇದನ್ನೂ ಓದಿ: ಚಿದಂಬರಂ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್ 

ಚಿದಂಬರಂ ಅವರ ಜಾಮೀನು ಅರ್ಜಿಯನ್ನು ಶುಕ್ರವಾರ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್, ಆರೋಪಿಯ ವಿರುದ್ಧ ಮಾಡಲಾಗಿರುವ ಆರೋಪಗಳು ಗಂಭೀರವಾದವು. ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಆರೋಪಿಯು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿತ್ತು.

ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಐಎನ್‌ಎಕ್ಸ್‌ ಮೀಡಿಯಾ ಪ್ರರಣಕ್ಕೆ ಸಂಬಂಧಿಸಿ 2017ರ ಮೇನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಅವರನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ಜಾಮೀನು ನೀಡಿದೆ. ಆದರೆ, ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ‍್ರಕರಣದಲ್ಲಿ ಜಾಮೀನು ದೊರೆದಿರುವುದರಿಂದ ಅವರು ಜೈಲಿನಲ್ಲೇ ಇರಬೇಕಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು