ಬುಧವಾರ, ಸೆಪ್ಟೆಂಬರ್ 23, 2020
23 °C
ಪಾಕಿಸ್ತಾನ ಸಂಸತ್‌ನಲ್ಲಿ ಇಂದು ಚರ್ಚೆ

ಅಮೆರಿಕ ಮಧ್ಯಪ್ರವೇಶಕ್ಕೆ ಆಗ್ರಹ

ಏಜನ್ಸಿಸ್‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಾಶ್ಮೀರ ವಿಚಾರದಲ್ಲಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಪಾಕಿಸ್ತಾನ ಸಂಸತ್ ಮಂಗಳವಾರ ಸಮಾವೇಶಗೊಳ್ಳಲಿದೆ. ಭಾರತದ ನಡೆ ಅಕ್ರಮ ಹಾಗೂ ಏಕಪಕ್ಷೀಯ ಎಂದು ಟೀಕಿಸಿರುವ ಪಾಕಿಸ್ತಾನ, ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಎಚ್ಚರಿಕೆಯನ್ನೂ ರವಾನಿಸಿದೆ.

ವಿಷಯವನ್ನು ಅಂತರರಾಷ್ಟ್ರೀಯ ವೇದಿಕೆಯ ಗಮನಕ್ಕೆ ತರುವ ಎಲ್ಲ ಯತ್ನಗಳನ್ನು ಮಾಡುವುದಾಗಿ ಪಾಕಿಸ್ತಾನ ತಿಳಿಸಿದೆ. 

‘ಭಾರತ ಆಕ್ರಮಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಬದಲಾವಣೆ ತರುವ ಯತ್ನವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳು ಹಾಗೂ ಕಾಶ್ಮೀರಿ ಜನರ ಭಾವನೆಗಳಿವೆ ವಿರುದ್ಧವಾಗಿದೆ. ಕಾಶ್ಮೀರಿಗಳ ಬಯಕೆಯಂತೆ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸುವುದನ್ನು ಪಾಕಿಸ್ತಾನ ಬೆಂಬಲಿಸುತ್ತದೆ’ ಎಂದು ಅಧ್ಯಕ್ಷ ಆರಿಫ್ ಅಲ್ವಿ ಟ್ವೀಟ್ ಮಾಡಿದ್ದಾರೆ.

ಅಮೆರಿಕ ವಿದೇಶಾಂಗ ಇಲಾಖೆಯ ದಕ್ಷಿಣ ಹಾಗೂ ಕೇಂದ್ರ ಏಷ್ಯಾದ ಸಹಾಯಕ ಕಾರ್ಯದರ್ಶಿ ಅಲೈಸ್ ಜಿ. ವೆಲ್ಸ್ ಅವರು ಸದ್ಯ ಪಾಕಿಸ್ತಾನದ ಪ್ರವಾಸದಲ್ಲಿದ್ದು, ಕಾಶ್ಮೀರ ವಿಚಾರದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅವರ ಮನವೊಲಿಸಲು ಪಾಕ್ ಸಿದ್ಧತೆ ನಡೆಸಿದೆ. ಮಧ್ಯಸ್ಥಿಕೆ ವಹಿಸಲು ತಾವು ಸಿದ್ಧ ಎಂದು ಟ್ರಂಪ್ ಇತ್ತೀಚೆಗೆ ಹೇಳಿದ್ದರು. ಆದರೆ ಭಾರತ ಇದನ್ನು ತಳ್ಳಿಹಾಕಿತ್ತು. 

ಸೇನಾ ಮುಖ್ಯಸ್ಥ ಜನರಲ್ ಬಾಜ್ವಾ ಅವರು ಗಡಿಯಲ್ಲಿ ಭದ್ರತಾ ಸ್ಥಿತಿ ಪರಾಮರ್ಶೆ ನಡೆಸಲು ಮಂಗಳವಾರ ಕಮಾಂಡರ್‌ಗಳ ಸಭೆ ಕರೆದಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು