ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕದನ ವಿರಾಮ ಉಲ್ಲಂಘಿಸಿದ ಪಾಕ್‌

Last Updated 20 ಜುಲೈ 2019, 19:23 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲಾ ವ್ಯಾಪ್ತಿಯಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಶನಿವಾರ ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಪಾಕ್‌ ಗುಂಡಿನ ದಾಳಿಗೆ ಭಾರತದ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ವೇಳೆ ಉಂಟಾಗಿರುವ ಹಾನಿಯ ಕುರಿತು ತಕ್ಷಣದ ವರದಿ ಇನ್ನೂ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 9 ಗಂಟೆಯಿಂದ ಇಲ್ಲಿನ ಮೆಂಧರ್‌ನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆ ಏಕಾಏಕಿ ಗುಂಡಿನ ದಾಳಿ ಮತ್ತು ಶೆಲ್‌ ದಾಳಿ ನಡೆಸಿದೆ. ಇದು ಗಡಿ ಭಾಗದ ನಿವಾಸಿಗಳಲ್ಲಿ ಆತಂಕ ಹೆಚ್ಚಿಸಿದ್ದು, ಅವರನ್ನು ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸೂಚಿಸಲಾಗಿದೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ.

ಭಾರತೀಯ ಸೇನೆಯ ‘ಆಪರೇಷನ್ ವಿಜಯ್’ ಕಾರ್ಯಾಚರಣೆಯ 20 ವರ್ಷಗಳ ನೆನಪಿಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದ್ರಾಸ್‌ನ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ನಮನ ಸಲ್ಲಿಸಲು ಭೇಟಿ ನೀಡಿದ ದಿನವೇ ಗಡಿಯಲ್ಲಿ ಗುಂಡಿನ ಚಕಮಕಿ ನಡೆದಿದೆ.

ಕಥುವಾ ಜಿಲ್ಲೆಯ ಉಜ್ (1 ಕಿ.ಮೀ ಉದ್ದ) ಮತ್ತು ಸಾಂಬಾ ಜಿಲ್ಲೆಯ ಬಸಂತರ್‌ನಲ್ಲಿ (617.4 ಮೀಟರ್‌ ಉದ್ದ) ಎರಡು ಸೇತುವೆಗಳನ್ನು ಸಿಂಗ್ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.

ಪಾಕಿಸ್ತಾನದಿಂದ ಉಗ್ರರ ಒಳನುಸುಳುವಿಕೆಯ ವಿರುದ್ಧ ಭಾರತೀಯ ಸೇನೆ 1999ರಲ್ಲಿ ಸೀಮಿತ ಯುದ್ಧವನ್ನು ‘ಆಪರೇಷನ್ ವಿಜಯ್’ ಹೆಸರಿನಲ್ಲಿ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT