ಶನಿವಾರ, ಜುಲೈ 31, 2021
21 °C

ಪಾಕ್‌ನಿಂದ ಅಪ್ರಚೋದಿತ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು–ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ರಾಂಪುರ ಸೆಕ್ಟರ್‌ ಬಳಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನದ ಸೇನೆ, ಗುಂಡಿನ ದಾಳಿ ನಡೆಸಿದೆ.

ಪಾಕಿಸ್ತಾನಕ್ಕೆ ಭಾರತೀಯ ಯೋಧರು ಸಹ ಪ್ರತ್ಯುತ್ತರ ನೀಡಿದರು ಎಂದು ರಕ್ಷಣಾ ವಕ್ತಾರ ಕರ್ನಲ್‌ ರಾಜೇಶ್‌ ಕಾಲಿಯಾ ಭಾನುವಾರ ತಿಳಿಸಿದ್ದಾರೆ.

ರಾಂಪುರ ಸೆಕ್ಟರ್‌ನಲ್ಲಿ ಎರಡನೇ ಹಾಗೂ ಕಾಶ್ಮೀರದ ಉತ್ತರ ಭಾಗದಲ್ಲಿ ಇದು ಮೂರನೇ ಕದನ ವಿರಾಮ ಉಲ್ಲಂಘನೆಯಾಗಿದೆ. ಭಾನುವಾರ ಬೆಳಿಗ್ಗೆ ಅಪ್ರಚೋದಿತ ದಾಳಿ ನಡೆಸಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು