ಮಂಗಳವಾರ, ಮೇ 26, 2020
27 °C

ಪಾಕಿಸ್ತಾನದ ಕರಾಚಿಯಲ್ಲಿ ವಿಮಾನ ಪತನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Narendra Modi

ನವದೆಹಲಿ: ‘ಪಾಕಿಸ್ತಾನ್ ಇಂಟರ್‌ ನ್ಯಾಷನಲ್ ಏರ್‌ಲೈನ್ಸ್‌’ಗೆ (ಪಿಐಎ) ಸೇರಿದ ವಿಮಾನ ಕರಾಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪತನವಾಗಿರುವುದು ತೀವ್ರ ದುಃಖ ಉಂಟುಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪಾಕಿಸ್ತಾನದಲ್ಲಿ ವಿಮಾನ ಪತನವಾಗಿ ಜೀವಹಾನಿಯಾಗಿರುವುದು ತೀವ್ರ ಬೇಸರ ಉಂಟುಮಾಡಿದೆ. ಮೃತರ ಕುಟುಂಬದವರ ಬಗ್ಗೆ ನಮಗೆ ಸಂತಾಪವಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇವೆ’ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: 

ಪಿಐಎಗೆ ಸೇರಿದ ‘ಏರ್‌ ಬಸ್ ಎ320’ ವಿಮಾನವು ಲಾಹೋರ್‌ನಿಂದ ಕರಾಚಿಗೆ ತೆರಳುತ್ತಿದ್ದ ವೇಳೆ ಶುಕ್ರವಾರ ಮಧ್ಯಾಹ್ನ ಪತನವಾಗಿತ್ತು. ವಿಮಾನದಲ್ಲಿ ಸಿಬ್ಬಂದಿಯೂ ಸೇರಿ 107 ಜನರಿದ್ದರು. ಎಷ್ಟು ಜನ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಬಂದಿಲ್ಲ. ಆದರೆ,  ವಿಮಾನದಲ್ಲಿದ್ದವರ ಪೈಕಿ ಯಾರೊಬ್ಬರೂ ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು