ಗುರುವಾರ , ಜೂಲೈ 9, 2020
24 °C

ಜಮ್ಮು ಕಾಶ್ಮೀರದ ಮೆಂಧಾರ್‌ನಲ್ಲಿ ಪಾಕ್ ಶೆಲ್ ದಾಳಿ: ವ್ಯಕ್ತಿಗೆ ಗಾಯ,ಮನೆಗೆ ಹಾನಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧಾರ್ ಸೆಕ್ಟರ್‌ನಲ್ಲಿ ಭಾನುವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ವ್ಯಕ್ತಿಯೊಬ್ಬರಿಗೆ ಗಾಯಗಳಾಗಿದ್ದು ಎರಡು ಮನೆಗಳು ಭಾಗಶಃ ಹಾನಿಗೀಡಾಗಿವೆ.

ಗಾಯಗೊಂಡ ವ್ಯಕ್ತಿಯನ್ನು ಗೋಹ್ಲಾದ್ ಗ್ರಾಮದ ಮೊಹಮ್ಮದ್ ಯಾಸೀನ್ ಎಂದು ಗುರುತಿಸಲಾಗಿದೆ 
ಭಾರತದ ಸೈನಿಕ ನೆಲೆ ಮತ್ತು ಗ್ರಾಮದ ಮೇಲೆ ಭಾನುವಾರ ಮುಂಜಾನೆ 3.10ಕ್ಕೆ ಪಾಕಿಸ್ತಾನ ಶೆಲ್ ದಾಳಿ ನಡೆಸಿದೆ. ಗ್ರಾಮಗಳನ್ನು ಗುರಿಯಿಟ್ಟು ಅವರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸುಮಾರು ನಾಲ್ಕು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ವ್ಯಕ್ತಿಯೊಬ್ಬರ ಕಾಲಿಗೆ ಗಾಯವಾಗಿದೆ, ಎರಡು ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದಾರೆ. ಗುಂಡಿನ ದಾಳಿ ಮತ್ತು ಶೆಲ್ ಆಕ್ರಮಣ ಮಾಡುವ ಮೂಲಕ  ಪಾಕ್ ಪಡೆ ಶನಿವಾರವೂ ಕದನ ವಿರಾಮ ಉಲ್ಲಂಘಿಸಿತ್ತು.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು