ನವದೆಹಲಿ: ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದ ಸಾಧುಗಳ ಹತ್ಯೆಗೆ ಸಂಬಂಧಿಸಿ ರಿಪಬ್ಲಿಕ್ ಟಿ.ವಿಯಲ್ಲಿ ಪ್ರಸಾರವಾದ ಸುದ್ದಿ ಕುರಿತಂತೆ ನಡೆಯುತ್ತಿರುವ ಎಲ್ಲಾ ಕ್ರಿಮಿನಲ್ ತನಿಖೆಗಳನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿತು.

ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂಬ ರಿಪಬ್ಲಿಕ್ ಟಿ.ವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮನವಿಯನ್ನು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಎಂ.ಆರ್.ಶಾ ಅವರಿರುವ ನ್ಯಾಯಪೀಠ ತಿರಸ್ಕರಿಸಿತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಡೆಸುತ್ತಿರುವ ತನಿಖೆ ಮುಂದುವರಿಯಲಿದೆ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿತು.

ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳದಿರಲು ಮತ್ತೆ ಮೂರು ವಾರಗಳ ರಕ್ಷಣೆ ನೀಡಿತು. ಅವರ ವಿರುದ್ಧ ವಿವಿಧ ನಗರ–ಪಟ್ಟಣಗಳಲ್ಲಿ ದಾಖಲಿಸಿರುವ ಎಫ್ಐಆರ್ಗಳನ್ನು ವಜಾಗೊಳಿಸಿದ ನ್ಯಾಯಪೀಠ, ‘ಏಪ್ರಿಲ್ 21ರಂದು ರಿಪಬ್ಲಿಕ್ ಟಿ.ವಿಯಲ್ಲಿ ಪ್ರಸಾರವಾದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹೊಸದಾಗಿ ದೂರು ಅಥವಾ ಎಫ್ಐಆರ್ ದಾಖಲಿಸಬಾರದು’ ಎಂದೂ ನಿರ್ದೇಶನ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.