ಮಂಗಳವಾರ, ಫೆಬ್ರವರಿ 18, 2020
23 °C

ಕಾಶ್ಮೀರದಲ್ಲಿ ಪಂಚಾಯಿತಿ ಚುನಾವಣೆ ಘೋಷಣೆ: ಇವಿಎಂ ಬದಲು ಮತಪತ್ರ ಬಳಕೆಗೆ ನಿರ್ಧಾರ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಾರ್ಚ್ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ (ಗ್ರಾಮ ಪಂಚಾಯಿತಿ) ನಡೆಯಲಿದೆ. ರಾಜ್ಯದ ವಿಶೇಷಾಧಿಕಾರ ರದ್ದಾದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದು.

‘ಎಲ್ಲ ಬ್ಲಾಕ್‌ಗಳಲ್ಲಿ ಖಾಲಿಯಿರುವ ಪಂಚಾಯಿತಿ ಸದಸ್ಯತ್ವದ ಸ್ಥಾನಗಳಿಗೆ ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸಲಾಗುವುದು. ಒಟ್ಟು 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ’ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ಘೋಷಿಸಿದರು.

ಕಳೆದ ಆಗಸ್ಟ್‌ ತಿಂಗಳಲ್ಲಿ ಕೇಂದ್ರ ಸರ್ಕಾರವು ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಕಣಿವೆ ರಾಜ್ಯದಲ್ಲಿ  ನಡೆಯುತ್ತಿರುವ ದೊಡ್ಡ ರಾಜಕೀಯ ವಿದ್ಯಮಾನ ಇದು. ಜಮ್ಮು ಮತ್ತು ಕಾಶ್ಮೀರದಿಂದ ಲಡಾಖ್ ಪ್ರತ್ಯೇಕಿಸಿ, ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನು ಕೇಂದ್ರ ಸರ್ಕಾರವು ಕಳೆದ ಆಗಸ್ಟ್‌ನಲ್ಲಿ ಘೋಷಿಸಿತ್ತು.

ಇದೀಗ ಜಮ್ಮು ಮತ್ತು ಕಾಶ್ಮೀರದ ಆಡಳಿತವನ್ನು ಲೆಫ್ಟಿನೆಂಟ್ ಜನರಲ್ ಜಿ.ಸಿ.ಮುರ್ಮು ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಈವರೆಗೆ ಇಂಟರ್ನೆಟ್ ಸಂಪರ್ಕ ಪೂರ್ಣ ಪ್ರಮಾಣದಲ್ಲಿ ಮರುಸ್ಥಾಪನೆಯಾಗಿಲ್ಲ. ಸಂವಹನದ ಮೇಲಿನ ನಿರ್ಬಂಧವೂ ಮುಂದುವರಿದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು