ಶುಕ್ರವಾರ, ಜನವರಿ 24, 2020
27 °C

ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ: ಪೊಲೀಸರನ್ನು ಪ್ರಶ್ನಿಸಿದ ಸಂಸದೀಯ ಸಮಿತಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡಿರುವ ಬಗ್ಗೆ ಸಂಸದೀಯ ಸಮಿತಿಯು ದೆಹಲಿ ಪೊಲೀಸರನ್ನು ಪ್ರಶ್ನಿಸಿದ್ದು, ವಿದ್ಯಾರ್ಥಿಗಳೊಂದಿಗೆ ಸಹಾನುಭೂತಿಯಿಂದ, ಪ್ರಬುದ್ಧವಾಗಿ ವರ್ತಿಸಬೇಕು ಎಂದು ಸೂಚಿಸಿತು ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರ ರಾಜಧಾನಿಯಲ್ಲಿ ಮೇಲಿಂದ ಮೇಲೆ ನಿರ್ಬಂಧಗಳನ್ನು ಹೇರುವುದರಿಂದ ಸಾಮಾನ್ಯ ಜನರಿಗೆ ತೊಂದರೆ ಆಗುತ್ತಿದೆ ಎಂದೂ ಸಮಿತಿ ಹೇಳಿದೆ.

ಕಾಂಗ್ರೆಸ್‌ ಸಂಸದ ಆನಂದ ಶರ್ಮಾ ಅಧ್ಯಕ್ಷತೆಯ ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು, ದೆಹಲಿಯಲ್ಲಿ ಹೆಚ್ಚುತ್ತಿರುವ  ಅಪರಾಧಗಳ ಕುರಿತು ಚರ್ಚಿಸಲು ಸೋಮವಾರ ಕರೆದ ಸಭೆಯಲ್ಲಿ ಗೃಹ ಇಲಾಖೆಯ ಉನ್ನತ ಅಧಿಕಾರಿಗಳು, ದೆಹಲಿ ಪೊಲೀಸ್‌ ಕಮಿಷನರ್‌ ಅಮೂಲ್ಯ ಪಟ್ನಾಯಕ್‌, ಹರಿಯಾಣ ಡಿಜಿಪಿ ಮನೋಜ್‌ ಯಾದವ್‌, ಉತ್ತರ ಪ್ರದೇಶ, ರಾಜಸ್ಥಾನದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. 

ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಘಟನೆಗಳನ್ನು ಉಲ್ಲೇಖಿಸದೇ, ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಪೊಲೀಸರು ವರ್ತಿಸಿದ ರೀತಿಯ ಬಗ್ಗೆ ಸಮಿತಿ ಆಕ್ಷೇಪ ವ್ಯಕ್ತಪಡಿಸಿತು ಎಂದು ಮೂಲಗಳು ಹೇಳಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು